ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವ

0

 

ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಶಾಲಾ ಪ್ರಾರಂಭೋತ್ಸವವು ಮೇ 25ರಂದು ಸಂಭ್ರಮದಿಂದ ನಡೆಯಿತು. ಲವಲವಿಕೆಯಿಂದ ವಿದ್ಯಾರ್ಥಿಗಳು ಶಾಲಾ ಆವರಣವನ್ನು ಮೆರವಣಿಗೆಯ ಮೂಲಕ ಪ್ರವೇಶಿಸಿದರು. ಶಾಲಾ ಆವರಣವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಶಿಕ್ಷಕ ವೃಂದದವರು ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸುವುದರೊಂದಿಗೆ ಹೊಸ ಶೈಕ್ಷಣಿಕ ವರ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿ, ಶಾಲಾಡಳಿತಾಧಿಕಾರಿ ವಸಂತ ರೈ ಕಾರ್ಕಳ, ಸಂಸ್ಥೆಯ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕೆ.ಎಂ.ಬಿ, ಮುಖ್ಯಗುರು ಸರಸ್ವತಿ ಎಂ, ಹಾಗೂ ಶಿಕ್ಷಕ- ಶಿಕ್ಷಕೇತರ ವೃಂದವರು, ಪೋಷಕರು ಉಪಸ್ಥಿತರಿದ್ದರು.

 

 

ಸನ್ಮಾನ: ಪ್ರಗತಿ ವಿದ್ಯಾಸಂಸ್ಥೆಗೆ ಹೊಸದಾಗಿ ಸೇರ್ಪಡೆಗೊಂಡ ಯೋಗದಲ್ಲಿ ನೊಬೆಲ್ ವರ್ಲ್ಡ್ ರೇಕಾರ್ಡ್ ಸಾಧನೆ ಮಾಡಿರುವ ವಿದ್ಯಾರ್ಥಿ ಮೋನಿಷ್ ತಂಟೆಪ್ಪಾಡಿಯವರನ್ನು ಮತ್ತು ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕ ಅವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here