ಜಿಲ್ಲೆಯಲ್ಲಿ ಸಾಕಷ್ಟು ಮರಳು ಲಭ್ಯವಿದೆ-ಗೊಂದಲ ಬೇಡ -`ಮರಳು ಮಿತ್ರ’ ಆಪ್‌ನಲ್ಲಿ ಮಿತ ದರದಲ್ಲಿ ಮರಳು

0

  • ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

ಮಂಗಳೂರು:ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧದ ಹಿನ್ನೆಲೆಯಲ್ಲಿ ಮರಳಿನ ದರ ಹೆಚ್ಚಾಗಿದೆ ಎಂಬ ಗೊಂದಲ ಸೃಷ್ಟಿಯಾಗಿದ್ದು, ಜಿಯಲ್ಲಿ ಮುಂದಿನ ಮೂರು ತಿಂಗಳಿಗೆ ಬೇಕಾದಷ್ಟು ಮರಳು ಸಂಗ್ರಹವಿದ್ದು ಯಾವುದೇ ಗೊಂದಲ ಬೇಡ ಎಂದು ಜಿಧಿಕಾರಿ ಡಾ.ರಾಜೇಂದ್ರ ಕೆ.ವಿ.ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ (ಡಿಸಿಲ್ಟಿಂಗ್) ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತಿದೆ.ಸಿಹಿ ನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ.ಮರಳು ಮಿತ್ರ ಆಪ್‌ನಲ್ಲಿ ಅರ್ಜಿ ಸಲ್ಲಿಸಿ ೭೦೦೦ ರೂ.ಗೆ ೧೦ ಮೆಟ್ರಿಕ್ ಟನ್ ಮರಳು ಪಡೆಯಬಹುದು.ಜಿಎಸ್‌ಟಿ ಮತ್ತು ಸಾಗಾಟ ವೆಚ್ಚದೊಂದಿಗೆ ನಿರ್ಮಾಣ ಕಾಮಗಾರಿಗೆ ಅಗತ್ಯ ಮರಳನ್ನು ಖರೀದಿಸಬಹುದು ಎಂದು ಹೇಳಿದ ಜಿಧಿಕಾರಿ, ಯಾರೂ ಅಕ್ರಮ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದರು.

ಈಗಾಗಲೇ ಹೂಳೆತ್ತುವಿಕೆ ಮೂಲಕ ಅದ್ಯಪಾಡಿಯಲ್ಲಿ ೯೦೦೦ ಹಾಗೂ ಶಂಭೂರು ಮರಳು ಸ್ಟಾಕ್ ಯಾರ್ಡ್‌ನಲ್ಲಿ ೧೨೦೦೦ ಮೆಟ್ರಿಕ್ ಟನ್ ಮರಳನ್ನು ಸಂಗ್ರಹಿಸಿಡಲಾಗಿದೆ.ಜಿಲ್ಲೆಯ ನಿರ್ಮಾಣ ಕಾಮಗಾರಿಯ ಬೇಡಿಕೆಗೆ ತಕ್ಕಂತೆ ಮರಳು ಲಭ್ಯವಿದೆ.ಹೊರ ಜಿಯಿಂದಲೂ ಮರಳಿಗೆ ಬೇಡಿಕೆ ಇದ್ದರೂ ಅನುಮತಿ ನೀಡಲಾಗಿಲ್ಲ.ಸದ್ಯ ಜಿಲ್ಲೆಯಲ್ಲಿ ಬೇಡಿಕೆಗೆ ಅನುಗುಣವಾಗಿ ಮರಳು ಪೂರೈಕೆಗೆ ಕ್ರಮ ವಹಿಸಲಾಗುವುದು.ಯಾವುದೇ ರೀತಿಯ ಗೊಂದಲ, ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ

ಶಂಭೂರು ಹಾಗೂ ಮರವೂರಿನ ಡ್ಯಾಂನಲ್ಲಿ ಹೂಳೆತ್ತುವಿಕೆಯ (ಡಿಸಿಲ್ಟಿಂಗ್) ಮೂಲಕ ತೆರವುಗೊಳಿಸಲಾದ ಮರಳನ್ನು ಸಂಗ್ರಹಿಸಲಾಗುತ್ತಿದೆ.ಸಿಹಿ ನೀರಿನ ಮರಳು ಇದಾಗಿರುವ ಕಾರಣ ಉತ್ತಮ ಗುಣಮಟ್ಟದ್ದಾಗಿದೆ.ಮರಳು ಮಿತ್ರ ಆಪ್‌ನಲ್ಲಿ  ಅರ್ಜಿ ಸಲ್ಲಿಸಿ ೭೦೦೦ ರೂ.ಗೆ ೧೦ ಮೆಟ್ರಿಕ್ ಟನ್ ಮರಳು ಪಡೆಯಬಹುದು- ಡಾ.ರಾಜೇಂದ್ರ ಕೆ.ವಿ. ದ.ಕ.ಜಿಲ್ಲಾಧಿಕಾರಿ

LEAVE A REPLY

Please enter your comment!
Please enter your name here