ಬೆಟ್ಟಂಪಾಡಿ ದೇವಾಲಯದ ಪ್ರಧಾನ ಅರ್ಚಕ ಶಂಭು ಶರ್ಮ ಕಾನುಮೂಲೆ‌ ನಿಧನ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಶಂಭುಶರ್ಮ(66ವ) ಕಾನುಮೂಲೆಯವರು ಮೇ 26 ರಂದು ನಿಧನರಾದರು. ಸಹೋದರನ ಮನೆಯಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರಿಗೆ ಮಧ್ಯಾಹ್ನ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯದಲ್ಲಿ ಕೊನೆಯುಸಿರೆಳೆದರು. ಮೃತರು ಪತ್ನಿ, ಈರ್ವರು ಪುತ್ರರು, ಓರ್ವ ಪುತ್ರಿ ಹಾಗೂ ಸಹೋದರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here