ಉಪ್ಪಿನಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ: ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣೆ

0

ಉಪ್ಪಿನಂಗಡಿ: ಗ್ರಾಮ ಪಂಚಾಯಿತಿ ಉಪ್ಪಿನಂಗಡಿ ಮತ್ತು ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಲ್ಯಾಣ ಮಂಡಳಿ ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ವಸತಿ ಯೋಜನೆ ಫಲಾನುಭವಿಗಳಿಗೆ ಆದೇಶ ಪತ್ರ ವಿತರಣಾ ಕಾರ್‍ಯಕ್ರಮ ಮೇ. 26ರಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.


ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಚಂದ್ರ ಮುಳಿಯ ಕಾರ್‍ಯಕ್ರಮವನ್ನು ಉದ್ಘಾಟಿಸಿ, ವಸತಿ ಯೋಜನೆ ಆದೇಶ ಪತ್ರ ವಿತರಿಸಿ ಮಾತನಾಡಿ ಫಲಾನುಭವಿಗಳು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಪಿಡಿಒ. ವಿಲ್ಪ್ರೆಡ್ ಲಾರೆನ್ಸ್ ರೋಡ್ರಿಗಸ್ ವಸತಿ ಯೋಜನೆ ಫಲಾನುಭವಿಗಳು ಮನೆ ನಿರ್ಮಾಣ ಸಂದರ್ಭದಲ್ಲಿ ಅನುಸರಿಸಬೇಕಾದ ನಿಯಮಗಳನ್ನು ತಿಳಿಸಿದರು. ಕಾರ್ಮಿಕ ಇಲಾಖೆಯ ಶಿಬಿರದ ಸಂಚಾಲಕ ಸಚಿನ್ ಆರೋಗ್ಯ ಶಿಬಿರದ ಬಗ್ಗೆ ಮಾಹಿತಿ ನೀಡಿದರು. ಡಾ. ಲುಕ್‌ಮಾನ್ ಶಿಬಿರಾರ್ಥಿಗಳ ಪರೀಕ್ಷೆ ನಡೆಸಿದರು.
ಕಾರ್‍ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಸುರೇಶ್ ಅತ್ರಮಜಲು, ಸಣ್ಣಣ್ಣ, ವಿದ್ಯಾಲಕ್ಷ್ಮಿ ಪ್ರಭು, ನೆಬಿಸ, ಯು.ಕೆ. ಇಬ್ರಾಹಿಂ, ಲೋಕೇಶ್ ಬೆತ್ತೋಡಿ ಮತ್ತಿತರರು ಉಪಸ್ಥಿತರಿದ್ದರು. ಕಾರ್‍ಯದರ್ಶಿ ದಿನೇಶ್ ಕಾರ್‍ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here