ಮೇ.28: ಅರ್ಕ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ಕಲಾಮಂದಿರ ಲೋಕಾರ್ಪಣೆ, ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

0

ಪುತ್ತೂರು: ಕೊಡಿಪಾಡಿ ಗ್ರಾಮದ ಅರ್ಕ ಶ್ರೀ ಮಹಾದೇವಿ ಭಜನಾ ಮಂದಿರದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಹಾಗೂ ವೇದಮೂರ್ತಿ ಶ್ರೀಧರ ಭಟ್ ಕಬಕ ರವರ ನೇತೃತ್ವದಲ್ಲಿ ಶ್ರೀ ಮಹಾದೇವಿ ಕಲಾಮಂದಿರದ ಲೋಕಾರ್ಪಣೆ ಕಾರ್ಯಕ್ರಮ ಹಾಗೂ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.


ಮೇ.28ರಂದು ಬೆಳಗ್ಗೆ ಗುರು ಗಣಪತಿ ಪ್ರಾರ್ಥನೆಯೊಂದಿಗೆ ದ್ವಾದಶ ನಾಳಿಕೇರ ಗಣಪತಿ ಹವನ, ಪುರಸ್ವರ ಶ್ರೀ ದುರ್ಗಾ ಹವನ, ಮಧ್ಯಾಹ್ನ ಹವನದ ಪೂರ್ಣಾಹುತಿ, ಶ್ರೀ ಮಹಾದೇವಿ ಅಮ್ಮನವರಿಗೆ ವಿಶೇಷ ದುರ್ಗಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿತರಣೆ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಬಳಿಕ ವಿವಿಧ ಭಜನಾ ಮಂಡಳಿಯವರಿಂದ ಭಜನಾಸೇವೆ ನಡೆಯಲಿದೆ.
ಕಲಾಮಂದಿರ ಲೋಕಾರ್ಪಣೆ: ಸಾಯಂಕಾಲ ಕಲಾಮಂದಿರದ ಲೋಕಾರ್ಪಣೆ ನಡೆಯಲಿದೆ. ಬಳಿಕ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ. ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಅರ್ಚಕರಾದ ಹರಿನಾರಾಯಣ ಅಸ್ರಣ್ಣರವರು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ವಹಿಸಲಿದ್ದಾರೆ.ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ.
ಯಕ್ಷಗಾನ ಬಯಲಾಟ: ರಾತ್ರಿ 9ಗಂಟೆಯಿಂದ ಶ್ರೀ ವನದುರ್ಗಾ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಹಾಗೂ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಸಂಪೂರ್ಣ ಶ್ರೀ ದೇವಿಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇಂದು ಹೊರೆಕಾಣಿಕೆ ಸಮರ್ಪಣೆ
ಕಾರ್ಯಕ್ರಮದ ಪ್ರಯುಕ್ತ ಮೇ.27ರಂದು ಸಾಯಂಕಾಲ 4ಗಂಟೆಯಿಂದ ಹಸಿರುವಾಣಿ ಮೆರವಣಿಗೆ ನಡೆಯಲಿದೆ. ಹಣಿಯೂರು, ಪಳ್ಳತ್ತಾರು, ಕೋಂಟ್ರುಪ್ಪಾಡಿ, ಕೊಡಿಪ್ಪಾಡಿ ಶ್ರೀ ಜನಾರ್ದನ ದೇವಸ್ಥಾನ, ಆನಾಜೆ, ಬಟ್ರುಪ್ಪಾಡಿ, ಓಜಾಳ ಮೊದಲಾದ ಕಡೆಗಳಿಂದಾಗಿ ಹಸಿರುವಾಣಿ ಮೆರವಣಿಗೆಯು ಸಾಗಿ ಅರ್ಕ ಶ್ರೀ ಮಹಾದೇವಿ ಭಜನಾ ಮಂದಿರ ತಲುಪಲಿದೆ.

LEAVE A REPLY

Please enter your comment!
Please enter your name here