ಕುದ್ಮಾರು: ಶ್ರೀ ಶಿರಾಡಿ ದೈವದ ಕಟ್ಟೆಯ ಪ್ರತಿಷ್ಠಾಪನೆ, ನೇಮೋತ್ಸವ

0

ಕಾಣಿಯೂರು: ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ದೈಪಿಲ ದ್ವಾರದ ಬಳಿ ಇರುವ ಕಟ್ಟತ್ತಾರು ಎಂಬಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಶಿರಾಡಿ ದೈವದ ಕಟ್ಟೆಯ ಪ್ರತಿಷ್ಠಾಪನೆ ಮತ್ತು ನೇಮೋತ್ಸವ ನಡೆಯಿತು.

ಬ್ರಹ್ಮಶ್ರೀ ವೇದಮೂರ್ತಿ ಕೇಶವ ಭಟ್ ಕೇಕನಾಜೆಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಶಿರಾಡಿ ದೈವದ ಕಟ್ಟೆಯ ಪ್ರತಿಷ್ಠಾಪನೆ ಮತ್ತು ನೇಮೋತ್ಸವ ನಡೆಯಿತು. ಕುದ್ಮಾರು ಅನ್ಯಾಡಿ ಗ್ರಾಮ ದೈವ ಶ್ರೀ ಶಿರಾಡಿ ರಾಜನ್ ದೈವಸ್ಥಾನದ ಆಡಳಿತ ಸಮಿತಿ ಗೌರವಾಧ್ಯಕ್ಷ ಕೆ.ಸೀತಾರಾಮ ರೈ ಸವಣೂರು, ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಪ್ರಧಾನ ಕಾರ್ಯದರ್ಶಿ ನಾಗೇಶ್ ಕೆ.ಕೆಡೆಂಜಿ, ಅನ್ಯಾಡಿ ಬಾರಿಕೆ ಕುಟುಂಬದ ಗೌರವಾಧ್ಯಕ್ಷ ದೇವಪ್ಪ ಗೌಡ ನಡುಮನೆ, ಅಧ್ಯಕ್ಷ ಯೋಗೀಶ್ ಕೆಡೆಂಜಿ, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಪ್ರವೀಣ್ ಕೆಡೆಂಜಿಗುತ್ತು, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಡಾ. ಸುಬ್ರಹ್ಮಣ್ಯ ಭಟ್ ಬರೆಪ್ಪಾಡಿ, ಅನ್ಯಾಡಿ ಬಾರಿಕೆ ಕುಟುಂಬದ ಹಿರಿಯರಾದ ಪದ್ಮಯ್ಯ ಗೌಡ ಅನ್ಯಾಡಿ, ಪದ್ಮಯ್ಯ ಗೌಡ ಕೆಡೆಂಜಿ, ಮೋನಪ್ಪ ಗೌಡ ಅನ್ಯಾಡಿ, ದೇವಣ್ಣ ಗೌಡ ಅನ್ಯಾಡಿ, ಆಡಳಿತ ಸಮಿತಿ ಉಪಾಧ್ಯಕ್ಷ ಆನಂದ ಅನ್ಯಾಡಿ, ಚೆನ್ನಪ್ಪ ಗೌಡ ನೂಜಿ, ದೇವಪ್ಪ ಗೌಡ ನಡುಮನೆ, ಬೆಳಂದೂರು ಗ್ರಾ.ಪಂ. ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿಕಟ್ಟ, ಪ್ರಧಾನ ಕಾರ್ಯದರ್ಶಿ ನಾಗೇಶ್ ಕೆ.ಕೆಡೆಂಜಿ, ಜತೆ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ, ಕೋಶಾಧಿಕಾರಿ ಉಮೇಶ್ ಕೆರೆನಾರು, ಚಂದ್ರಶೇಖರ ಬರೆಪ್ಪಾಡಿ ಹಾಗೂ ವಿವಿಧ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here