ಪಿಯುಸಿ ನಂತರ ಮುಂದೇನು…..? – ಜೂ.5: ವಿದ್ಯಾಮಾತಾ ಅಕಾಡೆಮಿಯಲ್ಲಿ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ ‘ವಿದ್ಯಾಮಾತಾ ಅಕಾಡೆಮಿ’ ಪುತ್ತೂರು ಇದರ ವತಿಯಿಂದ ಜೂ.5 ರಂದು ಬೆ.10 ರಿಂದ ಮ.3 ಗಂಟೆಯ ವರೆಗೆ  ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರ ನಡೆಯಲಿದ್ದು, ಪಿಯುಸಿ ವಿದ್ಯಾಭ್ಯಾಸದ ನಂತರ ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಯಾವ ರೀತಿಯ ಶಿಕ್ಷಣವನ್ನು ಪಡೆಯಬೇಕು ಮತ್ತು ಲಭ್ಯವಿರುವ ಉದ್ಯೋಗ ಅವಕಾಶಗಳು ಹಾಗೂ ವಿದ್ಯಾರ್ಥಿವೇತನಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ.

ಪುತ್ತೂರು ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಶರಣ್ ಕುಮಾರ್ ಶೆಟ್ಟಿ  ಮತ್ತು ಸತೀಶ್ ಭಟ್ ರವರು ಆಗಮಿಸಲಿದ್ದಾರೆ.

ಕಾರ್ಯಾಗಾರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಜೂನ್ 3ರ ಒಳಗಾಗಿ  ಹೆಸರು ಮತ್ತು ಮೊಬೈಲ್ ನಂಬರನ್ನು 9148935808 ಗೆ ವಾಟ್ಸಪ್ ಮೆಸೇಜ್ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಒಂದನೇ ಮಹಡಿ, ಎಪಿಯಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201 ಮೊಬೈಲ್ ಸಂಖ್ಯೆ : 9620468869 / 8590773486 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here