ಪುತ್ತೂರು ಸರ್ಕಾರಿ ಪ್ರ.ದ.ಮಹಿಳಾ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

0

ಪುತ್ತೂರು : ಪುತ್ತೂರು ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಇರ್ದೆ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.

ಶಾಸಕ ಸಂಜೀವ ಮಠಂದೂರುರವರು ದೀಪ ಬೆಳಗಿಸಿ ಶಿಬಿರ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಅಂತಗತವಾಗಿರುವ ಪ್ರತಿಭೆಯ ಅನಾವರಣಕ್ಕೆ ರಾಷ್ಟ್ರೀಯ ಸೇವಾ ಯೋಜನೆಯು ಸೂಕ್ತ ವೇದಿಕೆಯಾಗಿದೆ ಎಂದು ಹೇಳಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳು ಸಮಾಜದ ಸಮಸ್ಯೆಗಳಿಗೆ ದನಿಯಾಗಬೇಕೆಂದು ಶಾಸಕರು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀಧರ ಗೌಡ ಪಿ. ಅಧ್ಯಕ್ಷತೆ ವಹಿಸಿದ್ದರು. ಬೆಟ್ಟಂಪಾಡಿ ಗಾ.ಪಂ ಅಧ್ಯಕ್ಷೆ ಪವಿತ್ರ ದೈಯಾರಡ್ಕ, ಪುತ್ತೂರು ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಧಕೃಷ್ಣ ಬೋರ್ಕರ್, ಮಂಗಳೂರು ಬ್ರೆಟ್ ವೇ’ ಇಂಡಿಯಾ ಕನ್ಸಲ್ಟ್‌ನ್ಸ್‌ನ ಮನಮೋಹನ್ ರೈ ಚೆಲ್ಯಡ್ಕ, ಯುವ ಉದ್ಯಮಿ ಯತೀಶ್ ರೈ ಚೆಲ್ಯಡ್ಕ, ಇರ್ದೆ-ಉಪ್ಪಳಿಗೆ ಸರ್ಕಾರಿ ಫ್ರೌಢಶಾಲೆಯ ಮುಖ್ಯಗುರು ನಾರಾಯಣ, ಎಸ್‌ಡಿಎಮ್‌ಸಿ ಅಧ್ಯಕ್ಷ ಲೋಕನಾಥ ಆಚಾರ್ಯ, ಇರ್ದೆ ಸ.ಹಿ.ಪ್ರಾ ಶಾಲೆಯ ಮುಖ್ಯಗುರು ಲಿಂಗಮ್ಮ, ಮೂಡಬಿದಿರೆ ಕೆನರಾ ಬ್ಯಾಂಕ್‌ನ ಚೀಫ್ ಮ್ಯಾನೇಜರ್ ಪ್ರಮೋದ್‌ಕುಮಾರ್ ಕೆ., ಉಪ್ಪಳಿಗೆ ವಿಷ್ಣು ಯುವಕ ಮಂಡಲದ ಅಧ್ಯಕ್ಷ ಧನಂಜಯ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್‌ರೈ ಬೈಲಾಡಿ ಉಪಸ್ಥಿತರಿದ್ದರು.

ರಾ.ಸೇ.ಯೋಜನಾ ಅಧಿಕಾರಿ ಡಾ| ಗೋಪಾಲಕೃಷ್ಣ ಕೆ. ಪ್ರಾಸ್ತವಿಕವಾಗಿ ಮಾತನಾಡಿದರು. ಎನ್.ಎಸ್.ಎಸ್ ನಾಯಕಿಯರಾದ ಎಂ. ಸಾಕ್ಷಿ ವಿ. ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಸಹನಾ ಶೆಟ್ಟಿ ವಂದಿಸಿದರು. ರಾ.ಸೇ.ಯೋಜನಾ ಅಧಿಕಾರಿ ಡಾ| ಸುಖೇಶ್ ಪಿ ಹಾಗೂ. ರಾ.ಸೇ.ಯೋಜನಾಘಟಕದ ನಾಯಕಿಯರಾದ ಅಖಿಲ ಟಿ., ಸಹನಾ ಶೆಟ್ಟಿ ಮತ್ತು ಧನ್ಯಶ್ರೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here