ದ.ಕ.,ಉಡುಪಿ ಅಭಿವೃದ್ಧಿಗೆ ದೆಹಲಿಯಲ್ಲಿ ಚಿಂತನಾ ಸಭೆ

0

ಡಾ. ಯು.ಪಿ ಶಿವಾನಂದರು ಮಾತನಾಡುತ್ತಿರುವುದು.

ಪುತ್ತೂರು: ದೆಹಲಿ ಮಿತ್ರ ಹಾಗೂ ಸುದ್ದಿ ಮಾಹಿತಿ ಟ್ರಸ್ಟ್ ಸಹಯೋಗದಲ್ಲಿ ನವದೆಹಲಿಯ ದೆಹಲಿ ಕನ್ನಡ ಶಾಲೆಯಲ್ಲಿ ಮೇ 29ರಂದು ನಡೆದ `ನಮ್ಮೂರು ನಮ್ಮ ಹೆಮ್ಮೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಅಭಿವೃದ್ಧಿ ಕುರಿತು ಚಿಂತನಾ ಸಭೆ ನಡೆಯಿತು.ಉಡುಪಿ ಮತ್ತು ದಕ್ಷಿಣ ಕನ್ನಡ ಮೂಲದ ಹಲವು ಮಂದಿ ಐಎಎಸ್, ಐಪಿಎಸ್ ಅಧಿಕಾರಿಗಳೊಂದಿಗೆ ಸುದ್ದಿ ಮಾಹಿತಿ ಟ್ರಸ್ಟ್‌ನ ಆಡಳಿತಾಧ್ಯಕ್ಷ, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರೂ ಆಗಿರುವ ಡಾ.ಯು.ಪಿ.ಶಿವಾನಂದರವರು ಭಾಗವಹಿಸಿದ್ದರು.ದೆಹಲಿ ಕನ್ನಡ ಶಾಲೆಯ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಅಧ್ಯಕ್ಷತೆ ವಹಿಸಿದ್ದರು.

LEAVE A REPLY

Please enter your comment!
Please enter your name here