`ಕಲಾವಿದರ ಸಮರ್ಪಣಾ ಭಾವದಿಂದ ಯಕ್ಷಗಾನ ಕಲೆ ಉಳಿದಿದೆ’-`ಯಕ್ಷಧ್ರುವ ಪಟ್ಲ ಸಂಭ್ರಮ’ ಸಮಾರೋಪದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ

0

 

ಮಂಗಳೂರು:ಕಲಾವಿದರ ಸಮರ್ಪಣಾ ಭಾವದಿಂದ ಹೊಸತನವನ್ನು ಮೈಗೂಡಿಸಿಕೊಂಡ ಯಕ್ಷಗಾನದಂತಹ ಕಲೆ ಉಳಿದಿದೆ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಅಡ್ಯಾರ್ ಗಾರ್ಡನ್‌ನಲ್ಲಿ ಪುನೀತ್ ರಾಜ್‌ಕುಮಾರ್ ವೇದಿಕೆಯಲ್ಲಿ ನಡೆದ `ಯಕ್ಷಧ್ರುವ ಪಟ್ಲ ಸಂಭ್ರಮ- 2022ರ ಸಮಾರೋಪ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.ನಮ್ಮ ನಡುವೆ ಸಾಕಷ್ಟು ಕಲೆಗಳು ನಶಿಸಿ ಹೋಗಿವೆ.ಆದರೆ ಯಕ್ಷಗಾನ ಕಲೆಯಲ್ಲಿ ಪಟ್ಲ ಸತೀಶ್‌ರಂತಹ ಯುವ ಕಲಾವಿದರು ಹೊಸತನವನ್ನು ತೋರಿಸಿಕೊಟ್ಟ ಕಾರಣ ಸಾಕಷ್ಟು ಜನರನ್ನು ಆಕರ್ಷಿಸುತ್ತಿದೆ.ಯಕ್ಷಗಾನ ಎಲ್ಲರನ್ನೂ ಆಕರ್ಷಿಸುವ ಒಂದು ಅದ್ಭುತ ಕಲೆ.ಆದರೆ ಯಕ್ಷಗಾನ ಕಲಾವಿದರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಾಕಷ್ಟು ಕಷ್ಟ ನಷ್ಟ ಪಟ್ಟಿದ್ದಾರೆ.ಅದರಿಂದಾಗಿ ಕಲೆ ಉಳಿದಿದೆ.ಕನ್ನಡ ಭಾಷೆ ಬೆಳೆದಿದೆ.ಇಂತಹ ಕಲಾವಿದರಿಗೆ ನೆರವು ನೀಡಲು ಪಟ್ಲ ಫೌಂಡೇಶನ್ ಮುಂದೆ ಬಂದಿರುವುದು ಶ್ಲಾಘನೀಯ ಎಂದು ಹೇಳಿದ ಗೃಹ ಸಚಿವರು, ಪಟ್ಲ ಅವರ ಯೋಜನೆಗೆ ಸರಕಾರದ ಸಹಾಯ ನೀಡುವ ಭರವಸೆ ನೀಡಿದರು.ನಾನು ಯಕ್ಷಗಾನದ ಮತ್ತು ಪಟ್ಲ ಸತೀಶ್ ಅವರ ಅಭಿಮಾನಿ ಎಂದು ಅರಗ ಜ್ಞಾನೇಂದ್ರ ಹೇಳಿದರು.ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಮತ್ತು ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಶುಭ ಹಾರೈಸಿದರು.ಬಂದರು ಮತ್ತು ಮೀನುಗಾರಿಕೆ, ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ, ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ, ನಿವೃತ್ತ ಕೆಪಿಎಸ್‌ಸಿ ಆಯುಕ್ತ ಟಿ.ಶ್ಯಾಮ್ ಭಟ್, ಕಿಯೋನಿಸ್ಕ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮೈಸೂರು ಎಲೆಕ್ಟ್ರಾನಿಕ್ ಲಿ.ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೊಳಿಯಾರ್, ಹೇರಂಬ ಕೆಮಿಕಲ್ ಇಂಡಸ್ಟ್ರೀಸ್ ನಿರ್ದೇಶಕ ಸದಾಶಿವ ಶೆಟ್ಟಿ ಕುಳೂರು ಕನ್ಯಾನ, ಗುಜರಾತ್ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ, ಸಿಎ ದಿವಾಕರ್ ರಾವ್, ಉದ್ಯಮಿ ಆನಂದ ಶೆಟ್ಟಿ ತೋನ್ಸೆ, ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಶಶೀಂದ್ರ ಕುಮಾರ್, ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಜಯರಾಮ್ ಶೇಖ, ಬಂಟ್ಸ್ ಸಂಘ ಸುರತ್ಕಲ್ ಅಧ್ಯಕ್ಷ ಸುಧಾಕರ್ ಪೂಂಜಾ, ಅಡ್ಯಾರ್ ಮಾಧವ್ ನಾಯಕ್, ಕಳತ್ತೂರು ವಿಶ್ವನಾಥ್ ಶೆಟ್ಟಿ, ವಿಜಯಕುಮಾರ್ ಅಮೀನ್, ಪಟ್ಲ ಮಹಾಬಲ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ ಮೊದಲಾದವರು ಉಪಸ್ಥಿತರಿದ್ದರು.ಪಟ್ಲ ಫೌಂಡೇಶನ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಸ್ವಾಗತಿಸಿದರು.ಕದ್ರಿ ನವನೀತ ಶೆಟ್ಟಿ ಮತ್ತು ಪುರುಷೋತ್ತಮ ಕೆ ಭಂಡಾರಿ ಕಾರ್ಯ ಕ್ರಮ ನಿರೂಪಿಸಿದರು.

ಪಟ್ಲ ಸಂಭ್ರಮ-2022 ಕ್ಕೆ ಚಾಲನೆ: ಅಶಕ್ತ ಕಲಾವಿದರಿಗೆ ನೆರವು ನೀಡುವುದು ದೇವರ ಆರಾಧನೆಗೆ ಸಮಾನವಾದುದು ಎಂದು ಕೊಂಡೆವೂರು ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ವತಿಯಿಂದ ಅಡ್ಯಾರ್ ಗಾರ್ಡನ್‌ನ ಪುನೀತ್ ರಾಜ್ ಕುಮಾರ್ ವೇದಿಕೆಯಲ್ಲಿ ಯಕ್ಷಧ್ರುವ ಪಟ್ಲ ಸಂಭ್ರಮ- 2022ರ ಉದ್ಘಾಟನಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.ಯಕ್ಷಗಾನದ ಪೆಟ್ಟಿಗೆ ತೆರೆದು ಬೊಂಬೆಯಾಟದ ಬೊಂಬೆಗಳನ್ನು ಎತ್ತಿ ಆಡಿಸುವ ಮೂಲಕ ಪಟ್ಲ ಸಂಭ್ರಮಕ್ಕೆ ಚಾಲನೆ ನೀಡಲಾಯಿತು. ಪಟ್ಲ ಫೌಂಡೇಶನ್ ಟ್ರಸ್ಟ್ ಗೌರವಾಧ್ಯಕ್ಷ ಸದಾಶಿವ ಶೆಟ್ಟಿ ಕನ್ಯಾನ, ಯಕ್ಷಗಾನ ಕಲಾವಿದರನ್ನು ತಾತ್ಸಾರದಿಂದ ಕಾಣುತ್ತಿದ್ದರು. ಆದರೆ ಇಂದು ಅದೇ ಯಕ್ಷ ಕಲೆಗೆ ನಿಜವಾದ ಗೌರವ, ಸಮ್ಮಾನ ಸಿಗುವಂತಾಗಲು ಪಟ್ಲ ಸತೀಶ್ ಶೆಟ್ಟಿಯವರು ಕಾರಣಕರ್ತರಾಗಿದ್ದಾರೆ.ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ ಸಹಾಯ ಸಲ್ಲಿಸುತ್ತಿರುವ ಟ್ರಸ್ಟ್ ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು.ಗುಜರಾತ್‌ನ ಉದ್ಯಮಿ ಶಶಿಧರ ಬಿ. ಶೆಟ್ಟಿ ಬರೋಡ ಅವರು ಅಧ್ಯಕ್ಷತೆ ವಹಿಸಿದ್ದರು.ಮುಖ್ಯ ಅತಿಥಿಯಾಗಿ ಉದ್ಯಮಿ ಸಿಎ ದಿವಾಕರ್ ರಾವ್ ಸಂದರ್ಭೋಚಿತ ಮಾತನಾಡಿ, ಶುಭ ಹಾರೈಸಿದರು.

ಪುಸ್ತಕ ಬಿಡುಗಡೆ: ಪಟ್ಲಯಾನದ ಆರು ವರ್ಷಗಳ ಯಶೋಗಾಥೆ ಧ್ರುವ ಪ್ರಭ ಹಾಗೂ ಯಕ್ಷರಂಗದ ಧ್ರುವತಾರೆ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಲೋಕಾರ್ಪಣೆಗೊಳಿಸಲಾಯಿತು.ಪಟ್ಲ ಫೌಂಡೇಶನ್ ಪ್ರಧಾನ ಸಂಚಾಲಕ, ಜಾಗತಿಕ ಬಂಟ್ಸ್ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತಾಡುತ್ತಾ, ಅಶಕ್ತ ಕಲಾವಿದರಿಗೆ ನೆರವಾಗುವ ಮೂಲಕ ಪಟ್ಲ ಫೌಂಡೇಶನ್ ಶ್ಲಾಘನೀಯ ಕೆಲಸ ಮಾಡುತ್ತಿದೆ.ಸತೀಶ್ ಶೆಟ್ಟಿ ಪಟ್ಲ ಅವರು ಸಮಾಜದ ಎಲ್ಲ ವರ್ಗದ ನೊಂದವರ ಕಣ್ಣೀರು ಒರೆಸುತ್ತಿದ್ದಾರೆ.ಇದಕ್ಕಾಗಿ ಅವರನ್ನು ಅಭಿನಂದಿಸಬೇಕು ಎಂದು ಹೇಳಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಹೇರಂಬ ಕೆಮಿಕಲ್ ಇಂಡಸ್ಟ್ರಿಸ್‌ನ ನಿರ್ದೇಶಕ ಸದಾಶಿವ ಶೆಟ್ಟಿ ಕುಳೂರು ಕನ್ಯಾನ,ಡಾ.ಕೃಷ್ಣ ಪ್ರಸಾದ್ ಕೂಡ್ಲು, ಜ್ಞಾನ ಸರೋವರ ವಿದ್ಯಾಸಂಸ್ಥೆ ಚೇರ್‌ಮೆನ್ ಡಾ. ಸುಧಾಕರ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಪಾಲೇಮಾರ್, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್., ಯೋಗೀಂದ್ರ ಭಟ್ ಉಳಿ, ರವಿಶಂಕರ್ ಶೆಟ್ಟಿ ಬಡಾಜೆ, ಡಾ.ರವಿ ಶೆಟ್ಟಿ ಮೂಡಂಬೈಲ್ ಕತಾರ್, ಮಾರಣಕಟ್ಟೆ ಕೃಷ್ಣಮೂರ್ತಿ, ಶಶೀಂದ್ರ ಕುಮಾರ್, ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ, ಜಯರಾಮ್ ಶೇಖ, ಬಂಟ್ಸ್ ಸಂಘ ಸುರತ್ಕಲ್ ಅಧ್ಯಕ್ಷ ಸುಧಾಕರ್ ಪೂಂಜಾ, ಅಡ್ಯಾರ್ ಮಾಧವ್ ನಾಯಿಕ್, ಕಳತ್ತೂರು ವಿಶ್ವನಾಥ್ ಶೆಟ್ಟಿ, ವಿಜಯಕುಮಾರ್ ಅಮೀನ್, ಮಹಾಬಲ ಶೆಟ್ಟಿ, ಪುರುಷೋತ್ತಮ ಭಂಡಾರಿ, ಜಗನ್ನಾಥ ಶೆಟ್ಟಿ ಬಾಳ, ಜಗದೀಶ್ ಶೆಟ್ಟಿ, ಅಶೋಕ್ ಶೆಟ್ಟಿ, ದಾಂಡೇಲಿ ಪ್ರಕಾಶ್ ಶೆಟ್ಟಿ, ದುರ್ಗಾಪ್ರಸಾದ್ ಶೆಟ್ಟಿ, ಡಾ. ಸತೀಶ್ ಭಂಡಾರಿ, ರವಿಶಂಕರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ ಪಟ್ಲ ಪ್ರಶಸ್ತಿ ಪ್ರದಾನ
ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್‌ರವರಿಗೆ `ಪಟ್ಲ ಪ್ರಶಸ್ತಿ-2022’ನ್ನು ಪ್ರದಾನ ಮಾಡಿ ಸನ್ಮಾನಿಸಲಾಯಿತು.ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ|ಎಂ.ಎಲ್.ಸಾಮಗ ಅಭಿನಂದನಾ ಭಾಷಣ ಮಾಡಿದರು.

ಸವಣೂರು ಸೀತಾರಾಮ ರೈಯವರಿಗೆ ಸನ್ಮಾನ
`ಸಹಕಾರ ರತ್ನ’ ಪ್ರಶಸ್ತಿ ಪುರಸ್ಕೃತರಾಗಿರುವ ಉದ್ಯಮಿ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ ದಂಪತಿ, ಉದ್ಯಮಿಗಳಾದ ಕೆ.ಡಿ.ಶೆಟ್ಟಿ ದಂಪತಿ,ವಕ್ವಾಡಿ ಪ್ರವೀಣ್ ಶೆಟ್ಟಿ, ಸುರೇಶ್ ಭಂಡಾರಿಯವರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here