![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು:ಕಲಿಯುಗ ಕಲೆ, ಕಾರಣಿಕ ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಮಜಲು ಸ್ವಾಮಿ ಕೊರಗಜ್ಜ, ಅಗ್ನಿ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ 29ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಹಗಲು ಕೋಲ, ಅಗೇಲು ಸೇವೆ ನಡೆಯಿತು. ನೂರಾರು ಭಕ್ತರು ಪಾಲ್ಗೊಂಡಿದ್ದು ಆಗಮಿಸಿದ ಭಕ್ತಾದಿಗಳಿಗೆ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.
ನಾಳೆ ಮಾನೆಚ್ಚಿಲ್, ಅಗೇಲು ಸೇವೆ: ಮೇ 31ರಂದು ಬೆಳಿಗ್ಗೆ ಸ್ವಾಮಿ ಕೊರಗಜ್ಜ ದೈವದ ಮಾನೆಚ್ಚಿಲ್ ಸೇವೆ, ಅಗೇಲು ಸೇವೆ ನಡೆಯಲಿದೆ ಎಂದು ಕ್ಷೇತ್ರದ ಧರ್ಮದರ್ಶಿ ಮಣಿಸ್ವಾಮಿ ತಿಳಿಸಿದ್ದಾರೆ.