ಪುತ್ರೂರು ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಆಡಳಿತದ 8ನೇ ವರ್ಷದ ಸಂಭ್ರಮ ಅಭಿಯಾನ

0

  • 15 ದಿನಗಳು ‘ಸೇವೆ, ಸುಶಾಸನ, ಬಡವರ ಕಲ್ಯಾಣ’ ಅಭಿಯಾನ

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷ ಪೂರೈಸಿದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಮೇ 30ರಿಂದ ಜೂನ್ 14ರ ವರೆಗೆ ಪುತ್ತೂರು ವಿಧಾನ ಸಭಾಕ್ಷೇತ್ರದಲ್ಲಿ ಕಳೆದ 7 ವರ್ಷಗಳಿಂದ ಮೋದಿ ಸರಕಾರದ ಕಾರ್ಯಸಾಧನೆಗಳ 7 ವರ್ಷಗಳ ಸುಶಾಸನ ಮತ್ತು 8 ನೇ ವರ್ಷದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮ ನಡೆಯಲಿದೆ ಎಂದು ಬಿಜೆಪಿ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 

 


ಪುತ್ತೂರು ಬಿಜೆಪಿ ಕಚೇರಿಯಲ್ಲಿ ಸುದ್ದಿಯೊಂದಿಗೆ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಉಚಿತ ಕೋವಿಡ್ ಲಸಿಕೆ ಹಾಗೂ ಪಡಿತರ ವಿತರಣೆ ಮೂಲಕ ಆಹಾರ ಮತ್ತು ಆರೋಗ್ಯ ಭದ್ರತೆಯನ್ನು ಖಾತ್ರಿಪಡಿಸಿದೆ . ಬಿಜೆಪಿ ಸರ್ಕಾರ ಸವಾಲುಗಳನ್ನು ಎದುರಿಸಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸಿದೆ. ಸರ್ಕಾರದ 8 ವರ್ಷಗಳ ಸಾಧನೆಗಳನ್ನು ಆಚರಿಸಲು ಪುತ್ತೂರು ವಿಧಾನಸಭಾ ಕ್ಷೇತ್ರದ ಪ್ರತಿ ಬೂತ್ ಗಳಲ್ಲೂ ಮೇ 30ರಿಂದ ಜೂನ್ 14ರವರೆಗೆ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನ ನಡೆಯಲಿದೆ. ಗ್ರಾಮಾಂತರ ‌ಮಂಡಲದಲ್ಲಿ ಸುಮಾರು 30ಸಾವಿರ ಮನೆ ಸಂಪರ್ಕ, ನಗರ ಮಂಡಲದಲ್ಲಿ 15 ಸಾವಿರ ಮನೆ ಸಂಪರ್ಕ ನಡೆಯಲಿದೆ. ಈ ಕಾರ್ಯಕ್ರಮಕ್ಕಾಗಿ ವಿವಿಧ ನಿಯೋಜನೆಗಾಗಿ ತಂಡಗಳನ್ನು ಮಾಡಲಾಗಿದೆ. ಆಯಾ ಆಯಾ ತಂಡ ತಮ್ಮ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮ ಮಾಡಲಿದೆ ಎಂದರು.

ದಿನಕ್ಕೆ 5 ಗಂಟೆಗಳ ಅಭಿಯಾನ:
ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ಅವರು ಮಾತನಾಡಿ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನಕ್ಕೆ ನಮ್ಮ ಎಲ್ಲಾ ಕಾರ್ಯಕರ್ತರು ದಿನಕ್ಕೆ5 ಗಂಟೆಯ ಹಾಗೆ 15 ದಿನದಲ್ಲಿ 75 ಗಂಟೆ ಪೂರ್ಣ ತೊಡಗಿಸಲಿದ್ದಾರೆ ಎಂದರು.

ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯ ಚಂದ್ರಶೇಖರ್ ರಾವ್ ಬಪ್ಪಳಿಗೆ ಅವರು 7 ವರ್ಷದಲ್ಲಿ ಮೋದಿ ಸರಕಾರದ ಆಡಳಿತ ಮಹತ್ ಯೋಜನಗಳನ್ನು ವಿವರಿಸಿದರು.ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ನಿತೀಶ್ ಶಾಂತಿವನ, ಪುರುಷೋತ್ತಮ ಮುಂಗ್ಲಿಮನೆ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here