ಮೇ 31: ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚ್ಯಾರಿಟೇಬಲ್ ಟ್ರಸ್ಟ್‌ನಡಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ವಾರ್ಷಿಕ ಕ್ರೀಡಾಕೂಟ `ಮಾಸ್ 2022′ ಮೇ 31 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ಜರಗಲಿದೆ.

ಶಾಸಕ ಸಂಜೀವ ಮಠಂದೂರುರವರು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಕ್ಷಯ ಕಾಲೇಜಿನ ಚೇರ್‌ಮ್ಯಾನ್ ಜಯಂತ್ ನಡುಬೈಲುರವರು ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ|ವಿಜಯ ಹಾರ್ವಿನ್, ತಾಲೂಕು ಕ್ರೀಡಾಂಗಣದ ಯುವ ಸಬಲೀಕರಣ ಹಾಗೂ ಕ್ರೀಡೆ ಇದರ ಸೂಪರ್‌ವೈಸರ್ ಶ್ರೀಕಾಂತ್ ಪೂಜಾರಿ ಬಿರಾವು, ಪಟ್ಟೆ ಎಜ್ಯುಕೇಶನಲ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಮೋನಪ್ಪ ಎಂ. ಅಕ್ಷಯ ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸ್ವರ್ಣ ಜ್ಯೋತ್ಸ್ನಾ, ಕ್ರೀಡಾ ಕಾರ್ಯದರ್ಶಿ ರಕ್ಷಾರವರು ಉಪಸ್ಥಿತಲಿರುವರು ಎಂದು ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕ್ರೀಡಾ ಸಂಯೋಜಕರಾದ ರಕ್ಷಣಾ ಟಿ.ಆರ್, ಕಿಶೋರ್ ಕುಮಾರ್ ರೈ, ಚೈತ್ರಾರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

LEAVE A REPLY

Please enter your comment!
Please enter your name here