ಮೇ.31: ನಿಡ್ಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರ

0

ನಿಡ್ಪಳ್ಳಿ;ನೊಂದಾಯಿತ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿತರಾದ ಸದಸ್ಯರಿಗೆ ಹಾಗೂ ಅವರ ಅವಲಂಬಿತರಿಗೆ ಮತ್ತು ಎಲ್ಲಾ ಸಾರ್ವಜನಿಕರಿಗೆ ಉಚಿತ ಆರೋಗ್ಯ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ ಮೇ.31 ರಂದು ಬೆಳಿಗ್ಗೆ ಗಂಟೆ 9 ರಿಂದ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಅಧ್ಯಕ್ಷೆ ಗೀತಾ.ಬಿ ತಿಳಿಸಿದ್ದಾರೆ. ಶಿಬಿರಕ್ಕೆ ಬರುವಾಗ ಮಂಡಳಿಯಿಂದ ನೀಡಲಾದ ನೊಂದಣಿ ಕಾರ್ಡ್, ಆಧಾರ್ ಕಾರ್ಡ್ ಮತ್ತು ಅವಲಂಬಿತರಿಗಾಗಿ ರೇಷನ್ ಕಾರ್ಡಿನ ಪ್ರತಿ ತರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here