ಜೂ.1: ತಿರ್ಲೆ ಮಹಾವಿಷ್ಣು ದೇವರ ನೂತನ ದೇವಾಲಯಕ್ಕೆ ಶಿಲಾನ್ಯಾಸ

0

ನೆಲ್ಯಾಡಿ: ಕಡಬ ತಾಲೂಕಿನ ಕೊಣಾಲು ಗ್ರಾಮದ ತಿರ್ಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ ತಂತ್ರಿಯವರ ಹಾಗೂ ವಾಸ್ತುಶಿಲ್ಪಿ ರಮೇಶ ಕಾರಂತರ ನಿರ್ದೇಶನ ಹಾಗೂ ಭಕ್ತ ಮಹಾಜನರ ಬೇಡಿಕೆಯಂತೆ ತಿರ್ಲೆ ಶ್ರೀ ಮಹಾವಿಷ್ಣು ದೇವರ ನೂತನ ದೇವಾಲಯದ ಶಿಲಾನ್ಯಾಸ ಜೂ.1ರಂದು ನಡೆಯಲಿದೆ.
ಶ್ರೀ ಎಡನೀರು ಮಠಾಧೀಶರಾದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರ ದಿವ್ಯ ಹಸ್ತದಿಂದ ಶಿಲಾನ್ಯಾಸ ನೆರವೇರಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಹಾಗೂ ಬ್ರಹ್ಮಶ್ರೀ ವೇದಮೂರ್ತಿ ನಾಗೇಶ ತಂತ್ರಿ ಕೆಮ್ಮಿಂಜೆ ಅವರು ಆಶೀರ್ವಚನ ನೀಡಲಿದ್ದಾರೆ. ಬಂದರು ಮತ್ತು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ‘ಶ್ರದ್ಧಾಕೇಂದ್ರ ಪುನರುತ್ಥಾನ ವಾಣಿ’ ನೀಡಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಶುಭಾಶಂಸನೆ ಮಾಡಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಅವರು ಜೀರ್ಣೋದ್ದಾರದ ಬಗ್ಗೆ ಸಲಹೆ ನೀಡಲಿದ್ದಾರೆ. ಕಾಂಚನ ಪೆರ್ಲ ಶ್ರೀ ಷಣ್ಮುಖ ದೇವಸ್ಥಾನದ ಆಡಳಿತ ಮೊಕ್ತೇಸರ ಧನ್ಯಕುಮಾರ್ ರೈ ಬಿಳಿಯೂರುಗುತ್ತು, ಪುತ್ತೂರಿನ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ, ರಾಮಕುಂಜ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕುವೆಚ್ಚಾರು, ವಾಸ್ತುಶಿಲ್ಪಿ ರಮೇಶ ಕಾರಂತ ಬೆದ್ರಡ್ಕ, ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಪೂವಾಜೆ, ಜಿ.ಪಂ.ಮಾಜಿ ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಮಾಜಿ ಸದಸ್ಯರಾದ ತೇಜಸ್ವಿನಿಶೇಖರ ಗೌಡ ಕಟ್ಟಪುಣಿ, ಉಷಾ ಅಂಚನ್, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಪಟೇರಿ, ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಅಜಿತ್ ಪಾಲೇರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here