ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆರ್.ಟಿ.ಒ ಆನಂದ ಗೌಡರಿಗೆ ಸನ್ಮಾನ

0


ಪುತ್ತೂರು: ಪುತ್ತೂರಿನ ಆರ್.ಟಿ.ಒ ಕೆ.ಆನಂದ ಗೌಡ ಅವರು ನಿವೃತ್ತರಾಗುತ್ತಿರುವ ನೆಲೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಮಂಗಳವಾರ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗೌಡ ಶಿಕ್ಷಣ ಕೇವಲ ಮಾಹಿತಿ ಒದಗಿಸುವ ಮಾಧ್ಯಮವಾಗದೆ ಬದುಕಿನ ದಾರಿ ತೋರುವ, ಜೀವನಾನುಭವ ಕಟ್ಟಿಕೊಡುವ ವಿಚಾರವಾಗಬೇಕು. ಶಾಲೆಯಲ್ಲಿ ಓದುವ ಮಕ್ಕಳಿಗೆ ಸಂಸ್ಕಾರ ದೊರಕಬೇಕಾದದ್ದು ಬಹಳ ಮುಖ್ಯ. ಅಂಬಿಕಾ ಶಿಕ್ಷಣ ಸಂಸ್ಥೆಗಳು ಈ ನೆಲೆಯಲ್ಲಿ ಅತ್ಯುತ್ಕೃ?ವಾಗಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಉತ್ತಮವಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದುತ್ತಿರುವ ಜನಪರ ಕಾಳಜಿಯುಳ್ಳ ಅಧಿಕಾರಿಯೊಬ್ಬರನ್ನು ಗುರುತಿಸಬೇಕಾದದ್ದು ಜನರ ಕರ್ತವ್ಯ. ಆನಂದ ಗೌಡರು ಅಂತಹ ವಿಶಿ? ಅಧಿಕಾರಿ ಎಂದು ಬಣ್ಣಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ, ಸಾರ್ವಜನಿಕ ಸಂಪರ್ಕಾಧಿಕಾರಿ ರಾಕೇಶ ಕುಮಾರ್ ಕಮ್ಮಜೆ, ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು. ಜನಾನುರಾಗಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆನಂದ ಗೌಡ ಅವರು ಮೇ ೩೧ರಂದು ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿದ್ದಾರೆ

LEAVE A REPLY

Please enter your comment!
Please enter your name here