ಕೋಡಿಂಬಾಡಿ ಬಿಲ್ಲವ ಸಮಿತಿಯ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

0

  • ಸಮಾಜದಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವಂತಾಗಬೇಕು- ಶಯನಾ ಜಯಾನಂದ

ಕೋಡಿಂಬಾಡಿ: ವಿದ್ಯಾರ್ಥಿಗಳಲ್ಲಿ ಧರ್ಮ ಸಂಸ್ಕಾರ ಬೆಳೆಸುವ ಕಾರ್ಯವನ್ನು ಸಂಘಟನೆ ಮಾಡುತ್ತಿದೆ, ವಿದ್ಯಾರ್ಥಿಗಳು ಸಮಾಜ ನೀಡುವ ಪ್ರೋತ್ಸಾಹವನ್ನು ಉಪಯೋಗಿಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನ ಅಲಂಕರಿಸುವಂತಾಗಬೇಕು ಎಂದು ಜಿ.ಪಂ.ಮಾಜಿ ಸದಸ್ಯೆ ಶಯನಾ ಜಯಾನಂದ ಹೇಳಿದರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡಂಜಿಯವರು ಮಾತನಾಡಿ, ಬಿಲ್ಲವ ಸಮಾಜದ ಶ್ರೇಯೋಭಿವೃದ್ಧಿಯಲ್ಲಿ ಸಂಘಟನೆಯ ಪಾತ್ರ ಮಹತ್ತರ ಎಂದರು. ಸಂಘಟನೆಯನ್ನು ಬಲಪಡಿಸುವಲ್ಲಿ ನಾವೆಲ್ಲ ಕಠಿಬದ್ಧರಾಬೇಕು ಎಂದು ಹೇಳಿದ ಅವರು ಬಿಲ್ಲವ ಸಮಾಜದ ಬಂಧುಗಳು ರಾಜಕೀಯ ರಹಿತವಾಗಿ ಗುರುನಾರಾಯಣ ಸ್ವಾಮಿಗಳ ಆದರ್ಶವನ್ನು ಸಮಾಜಕ್ಕೆ ತಲುಪಿಸುವ ಕೆಲಸವನ್ನು ಮಾಡಬೇಕು ಎಂದು ಹೇಳಿದರು. ಮುಖ್ಯ ಅತಿಥಿಗಳಾಗಿದ್ದ ಬಿಲ್ಲವ ತಾಲೂಕು ಸಮಿತಿಯ ಕೋಶಾಧಿಕಾರಿ ಮಹೇಶ್ಚಂದ್ರ ಸಾಲಿಯಾನ್, ವಲಯ ಸಂಚಾಲಕ ಮನೋಹರ ಆರ್‍ವಾರ, ಮಹಿಳಾ ವೇದಿಕೆ ಅಧ್ಯಕ್ಷೆ ಚಂದ್ರಕಲಾ ಮುಕ್ವೆ, ನಾರಾಯಣಗುರು ಮಂದಿರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿ, ಕೋಡಿಂಬಾಡಿ ಗ್ರಾ.ಪಂ ಅಧ್ಯಕ್ಷ ಕೆ. ರಾಮಚಂದ್ರ ಪೂಜಾರಿ ಶಾಂತಿನಗರ, ಗ್ರಾಮ ಸಮಿತಿ ಗೌರವಾಧ್ಯಕ್ಷರಾದ ತಾ.ಪಂ. ಮಾಜಿ ಅಧ್ಯಕ್ಷ ಜಯಾನಂದ ಕೆ. ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಡಿಂಬಾಡಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ರೇವತಿ ವೀರಪ್ಪ ಪೂಜಾರಿ ಡೆಕ್ಕಾಜೆ, ಸಹಕಾರಿ ಸಂಘಗಳ ನಿವೃತ್ತ ಲೆಕ್ಕ ಪರಿಶೋಧಕ ಚಂದ್ರಶೇಖರ ಪೂಜಾರಿ ಕಾಂತಳಿಕೆ ಮತ್ತು ಕೋಡಿಂಬಾಡಿ ಹಿ.ಪ್ರಾ. ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶೇಖರ ಪೂಜಾರಿ ಜೇಡರಕಾಲುರವರು ಸಂದರ್ಭೋಚಿತವಾಗಿ ಮಾತನಾಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಾರ್ಷಿಕ ಲೆಕ್ಕ ಪತ್ರ ಮಂಡಿಸಲಾಯಿತು. ಬಳಿಕ ಗ್ರಾಮ ಸಮಿತಿ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಪ್ರೋತ್ಸಾಹ ಧನ ವಿತರಿಸಲಾಯಿತು. ಪ್ರದ್ವಿನ್‌ರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಸಮಿತಿ ಅಧ್ಯಕ್ಷರಾದ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರುರವರು ಸ್ವಾಗತಿಸಿ, ವಾರ್ಷಿಕ ಲೆಕ್ಕಪತ್ರ ವಾಚಿಸಿದರು.ಭರತ್ ಕುಮಾರ್ ಶಾಂತಿನಗರ ಕಾರ್ಯಕ್ರಮ ನಿರೂಪಿಸಿದರು. ಶ್ರೀಧರ ಪೂಜಾರಿ ಕೆದಿಕಂಡೆರವರು ವಂದಿಸಿದರು. ನ್ಯಾಯವಾದಿ ಕುಮಾರನಾಥ ಪಲ್ಲತ್ತಾರು, ಕವಿತಾ, ವಿನುತಾ ಬದಿನಾರು, ಉಮೇಶ್ ಡೆಕ್ಕಾಜೆ ಸಹಕರಿಸಿದರು. ಗ್ರಾ.ಪಂ ಸದಸ್ಯೆ ಮಲ್ಲಿಕಾ ಅಶೋಕ್ ಪೂಜಾರಿ ಕಾಂತಳಿಕೆ, ಶಶಿಧರ ಡೆಕ್ಕಾಜೆ, ವಿಜಯ ಚೀಮುಳ್ಳು, ಶಶಿಧರ ಪಲ್ಲತ್ತಾರು, ಈಶ್ವರ ಪೂಜಾರಿ ನಿಡ್ಯ, ಮಹಿಳಾ ಘಟಕದ ಅಧ್ಯಕ್ಷೆ ಪ್ರೇಮಲತಾ ದೇವದಾಸ್, ದೇವದಾಸ್ ಪೂಜಾರಿ ಡೆಕ್ಕಾಜೆ, ದಯಾನಂದ ಪಲ್ಲತ್ತಾರು, ನಾಗೇಶ್ ಪೂಜಾರಿ, ಯಮುನಾ ಡೆಕ್ಕಾಜೆ ಸಹಿತ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here