ಸವಣೂರಿನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ತರಬೇತಿ

0

ಪುತ್ತೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಗ್ರಾಮ ಪಂಚಾಯತ್ ಸವಣೂರು, ಯುವಕ ಮಂಡಲ ಸವಣೂರು, ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸವಣೂರು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸವಣೂರು ವಲಯ ಇವರ ಸಹಕಾರದೊಂದಿಗೆ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ತರಬೇತಿ ಶಿಬಿರ ಮೇ. ೩೧ರಂದು ಸವಣೂರು ಯುವ ಸಭಾಭವನದಲ್ಲಿ ಜರಗಿತು. ಕಾರ್ಮಿಕ ಇಲಾಖೆಯ ವೈದ್ಯರಾದ ಡಾ.ಯಶವಂತರವರು ಕಾರ್‍ಯಕ್ರಮ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸವಣೂರು ಗ್ರಾ.ಪಂ, ಅಧ್ಯಕ್ಷೆ ರಾಜೀವಿ ಶೆಟ್ಟಿ ವಹಿಸಿದ್ದರು.

ಸವಣೂರು ಗ್ರಾ.ಪಂ, ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಸವಣೂರು ಸಿ.ಎ, ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಜಿಲ್ಲಾ ಯುವ ಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಹೇಮಲತಾರವರುಗಳು ಸಂದಭೋಚಿತವಾಗಿ ಮಾತನಾಡಿದರು. ಜನಜಾಗೃತಿ ವೇದಿಕೆಯ ಸವಣೂರು ವಲಯಾಧ್ಯಕ್ಷ ಮಹೇಶ್ ಕೆ.ಸವಣೂರು ಸ್ವಾಗತಿಸಿ, ಸವಣೂರು ಗ್ರಾ.ಪಂ, ಪಿಡಿಒ ಮನ್ನಥ ಅಜಿರಂಗಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸವಣೂರು ಯುವಕ ಮಂಡಲದ ಅಧ್ಯಕ್ಷ ಪ್ರಕಾಶ್ ಮಾಲೆತ್ತಾರು ವಂದಿಸಿದರು. ದಯಾನಂದ ಮೆದು ಕಾರ್‍ಯಕ್ರಮ ನಿರೂಪಿಸಿದರು. ಸವಣೂರು ಗ್ರಾ.ಪಂ, ಸದಸ್ಯರುಗಳಾದ ತೀರ್ಥರಾಮ್ ಕೆಡೆಂಜಿ, ಚಂದ್ರಾವತಿ ಸುಣ್ಣಾಜೆ, ರಫೀಕ್ ಎಂ.ಎ, ತಾರಾನಾಥ ಪಾಲ್ತಾಡಿ, ಮಾಜಿ ಅಧ್ಯಕ್ಷೆ ಇಂದಿರಾ ಬಿ.ಕೆ, ಮಾಜಿ ಸದಸ್ಯ ಸತೀಶ್ ಬಲ್ಯಾಯ, ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಶ್ರೀಧರ್ ಇಡ್ಯಾಡಿ,ಗಂಗಾಧರ್ ಪೆರಿಯಡ್ಕ, ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷ ಸುಪ್ರೀತ್ ರೈ ಖಂಡಿಗ, ಸವಣೂರು ಗ್ರಾ.ಪಂ, ಸಿಬ್ಬಂಧಿಗಳಾದ ದಯಾನಂದ ಮಾಲೆತ್ತಾರು, ಪ್ರಮೋದ್ ಕುಮಾರ್ ರೈ, ಜಯ ಸವಣೂರು, ಜಯಶ್ರೀ ಪಾಲ್ತಾಡಿರವರುಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here