ನಿವೃತ್ತಿ ಹೊಂದಿದ ಮೊಗರು ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಯು ಅವರಿಗೆ ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣಾ ಕಾರ್ಯಕ್ರಮ

0

ಪುತ್ತೂರು: ಸೇವಾ ನಿವೃತ್ತಿ ಹೊಂದಿದ ಕಡಬ ತಾಲೂಕಿನ ಸವಣೂರು ಮೊಗರು ಸ.ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಾವತಿ ಯು ಅವರಿಗೆ ಕಡಬ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಗೌರವಾರ್ಪಣಾ ಕಾರ್ಯಕ್ರಮ ಮೇ.31ರಂದು ಮೊಗರು ಶಾಲೆಯಲ್ಲಿ ನಡೆಯಿತು.


ಪ್ರಾ.ಶಾ.ಶಿ.ಸಂಘದ ಕಡಬ ತಾಲೂಕು ಅಧ್ಯಕ್ಷ ರಾಮಕೃಷ್ಣ ಮಲ್ಲಾರ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪ್ರಾ.ಶಾ.ಶಿ.ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ, ಜಿಲ್ಲಾ ಸಂಘದ ನಾಮ ನಿರ್ದೇಶಿತ ಸದಸ್ಯರಾದ ನಿಂಗರಾಜು, ಮೊಗರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಂ.ಎ ರಫೀಕ್ ಉಪಸ್ಥಿತರಿದ್ದರು. ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಶುಭ ಹಾರೈಸಿದರು.

LEAVE A REPLY

Please enter your comment!
Please enter your name here