ಹಳೆನೇರೆಂಕಿ: ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣ-ವಿದ್ಯಾರ್ಥಿಗಳಿಗೆ ಸನ್ಮಾನ

0

ರಾಮಕುಂಜ: 2021-22ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಇಲಾಖೆ ನಡೆಸಿದ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಹಳೆನೇರೆಂಕಿ ಉನ್ನತ ಹಿ.ಪ್ರಾ.ಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಾದ ಹೊಸಮಾರಡ್ಡ ಚಂದ್ರಶೇಖರ ಗೌಡ ಮತ್ತು ಶೋಭಾ ದಂಪತಿ ಪುತ್ರ ಹಿತೇಂದ್ರ ಹೆಚ್.ಎಸ್., ಮತ್ತು ದೇಂತಾರು ಹೊನ್ನಪ್ಪ ಗೌಡ ಮತ್ತು ದಮಯಂತಿ ದಂಪತಿ ಪುತ್ರ ಹಿತೇಶ್‌ರವರಿಗೆ ಸನ್ಮಾನ ಕಾರ್ಯಕ್ರಮ ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು.


ಹಿತೇಂದ್ರ ಹೆಚ್.ಎಸ್., ಕಳೆದ ವರ್ಷ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆಯಲ್ಲಿ ಪುತ್ತೂರು ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದರು. ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯಗುರು ಸಾಂತಪ್ಪ ವೈ., ಶಾಲಾ ಶಿಕ್ಷಕರು ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here