ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪುತ್ತೂರಿನಲ್ಲಿ ಸ್ಕೌಟ್ಸ್ & ಗೈಡ್ಸ್ ವತಿಯಿಂದ ಬೀಜದುಂಡೆ ತಯಾರಿ ಕಾರ್ಯಕ್ರಮ

0

ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಭಾರತ್ ಸ್ಕೌಟ್ಸ್ & ಗೈಡ್ಸ್ ಪುತ್ತೂರು ಘಟಕದ ವತಿಯಿಂದ ಬೊಳುವಾರಿನ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಬೀಜದುಂಡೆ ತಯಾರಿಸುವ ಕಾರ್ಯಕ್ರಮ ಜೂ.2ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಶಿವಾನಂದ, ಪುತ್ತೂರು ಸ್ಥಳೀಯ ಸಂಸ್ಥೆಯ ಕಾರ್ಯಾಧ್ಯಕ್ಷ ಶ್ರೀಧರ್ ರೈ, ಪುತ್ತೂರು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಜೊತೆ ಕಾರ್ಯದರ್ಶಿ ಸುನೀತ, ಗೈಡ್ ಶಿಕ್ಷಕಿಯರಾದ ಮೇಬಲ್ ಡಿ’ಸೋಜ, ಮೈತ್ರಿಯ, ಗೀತಾ ಆಚಾರ್ಯ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪುತ್ತೂರು ಸ್ಥಳೀಯ ಸಂಸ್ಥೆಯ ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಸೇರಿ ಒಟ್ಟು 1000 ದಷ್ಟು ಬೀಜದುಂಡೆಯನ್ನು ಸಿದ್ಧಪಡಿಸಿದರು.

LEAVE A REPLY

Please enter your comment!
Please enter your name here