ಅಜ್ಜಿಕಲ್ಲು ಶ್ರೀ ಶಕ್ತಿ ಜಟಾದಾರಿ ನೂತನ ಭಜನಾ ಮಂದಿರಕ್ಕೆ ಶಿಲಾನ್ಯಾಸ ಕಾರ್ಯಕ್ರಮ

0

ನಿಡ್ಪಳ್ಳಿ; ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಶ್ರೀ ಶಕ್ತಿ ಜಟಾಧಾರಿ ಭಜನಾ ಮಂದಿರದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜೂ.3 ರಂದು ನಡೆಯಿತು.

ಶ್ರೀ ಶ್ರೀ ಯೋಗಿ ಕೌಸ್ತುಭ ಮೋಹನ ದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಇವರ ದಿವ್ಯ ಉಪಸ್ಥಿತಿಯಲ್ಲಿ ವೇದಮೂರ್ತಿ ಬ್ರಹ್ಮಶ್ರೀ ದಿನೇಶ ಮರಡಿತ್ತಾಯ ಗುಮ್ಮಟೆಗದ್ದೆ ಇವರ ನೇತೃತ್ವದಲ್ಲಿ ವಾಸ್ತುಶಿಲ್ಪಿ ವಿ.ಜಿ.ಜಗನ್ನಿವಾಸ ರಾವ್ ರವರ ಮಾರ್ಗದರ್ಶನದಲ್ಲಿ ಭಜನಾ ಮಂದಿರದ ಶಂಕುಸ್ಥಾಪನೆ ನೆರವೇರಿದ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಹೇಮನಾಥ ಶೆಟ್ಟಿ ಕಾವು, ಲೋಕೇಶ್ ಬನ್ನೂರು, ಹಿಂದೂ ಮುಖಂಡ ಮುರಳೀಕೃಷ್ಣ ಹಸಂತಡ್ಕ,ರಾಧಾಕೃಷ್ಣ ಬೋರ್ಕರ್ ಕತ್ತಲೆಕಾನ, ಒಳಮೊಗ್ರು ಗ್ರಾ.ಪಂ.ಅಧ್ಯಕ್ಷೆ ತ್ರಿವೇಣಿ ಪಳ್ಳತ್ತಾರು, ಭಜನಾ ಮಂದಿರದ ಅಧ್ಯಕ್ಷ ಅಜಿತ್ ಹೊಸಮನೆ, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಊರವರು ಪಾಲ್ಗೊಂಡರು. ಶ್ರೀ ಮಣಿಕಂಠ ಚೆಂಡೆ ಮೇಳ ಬೆಟ್ಟಂಪಾಡಿ ಇವರಿಂದ ಚೆಂಡೆ ವಾದನ ಮೂಲಕ ಕಾರ್ಯಕ್ರಮ ನಡೆಯಿತು.
ಶಿಲಾನ್ಯಾಸ ಕಾರ್ಯಕ್ರಮದ ಧಾರ್ಮಿಕ ಕಾರ್ಯಕ್ರಮದಂಗವಾಗಿ ಜೂ.1 ರಂದು ರಾತ್ರಿ ಸುದರ್ಶನ ಹೋಮ, ಅಘೋರ ಹೋಮ, ಭಾದಾ ಉಚ್ಚಾಟನೆ ನಂತರ ಅನ್ನಸಂತರ್ಪಣೆ ನಡೆಯಿತು.

ಜೂ.2 ರಂದು ಬೆಳಿಗ್ಗೆ 108 ಕಾಯಿ ಗಣಪತಿ ಹೋಮ, ಭಾಗ ಸೂಕ್ತ ಹಾಗೂ ಐಕ್ಯಮತ್ಯ ಪೂಜೆ, ಪಾರಾಯಣ, ಮಹಾಪೂಜೆ, ಪ್ರಸಾದ ವಿತರಣೆ ನಂತರ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here