ಪುಣಚ ಶ್ರೀದೇವಿ ವಿದ್ಯಾಕೇಂದ್ರ ಪ್ರಾರಂಭೋತ್ಸವ, ಎಸ್‌ಎಸ್‌ಎಲ್‌ಸಿ ಸಾಧಕರಿಗೆ ಅಭಿನಂದನೆ

0

ಪುಣಚ : ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಜೂ.2ರಂದು ಶಾಲಾ ನಮೋ ಭಾರತಿ ಸಭಾಂಗಣದಲ್ಲಿ ಜರಗಿತು.

ದೀಪಜ್ವಲನ ಮತ್ತು ಪುಷ್ಪಾರ್ಚನೆಯ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಶಾಲೆಗೆ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳು ಭಾರತಮಾತೆಗೆ ಪುಷ್ಪಾರ್ಚನೆ ಮಾಡಿ ಬಳಿಕ ಪೋಷಕರಿಂದ ಆಶೀರ್ವಾದ ಪಡೆದುಕೊಂಡರು. 2021-22 ನೇ ಸಾಲಿನ ಹತ್ತನೇ ತರಗತಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಅತಿಥಿಗಳು ಸ್ಮರಣಿಕೆ ನೀಡಿ ಮತ್ತು ಶಾಲು ಹೊದಿಸಿ ಗೌರವಿಸಿದರು. ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ಪುಂಡರೀಕ ರಾವ್, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಶಿವಪ್ರಸಾದ್ ರೈ, ಆಡಳಿತ ಮಂಡಳಿ ಅಧ್ಯಕ್ಷ ಸತೀಶ್ಚಂದ್ರ ಎಸ್.ಆರ್, ಆಡಳಿತ ಮಂಡಳಿಯ ಸಂಚಾಲಕ ಜಯಶ್ಯಾಂ ನೀರ್ಕಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು. ಪ್ರೌಢಶಾಲಾ ಮುಖ್ಯಗುರು ರಜನಿ ಸ್ವಾಗತಿಸಿ, ಪ್ರಾಥಮಿಕ ಶಾಲಾ ಮುಖ್ಯಗುರು ಲೋಕೇಶ್ ವಂದಿಸಿದರು.

LEAVE A REPLY

Please enter your comment!
Please enter your name here