ಪುತ್ತೂರು: ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಕರೀಯ ಎಮ್ ಅವರಿಗೆ ಪುತ್ತೂರು ನಗರ ಪೊಲೀಸ್ ಠಾಣೆಗೆ ಮತ್ತು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ಕಾನ್ಸ್ಟೇಬಲ್ ಪರಮೇಶ್ವರ ಅವರಿಗೆ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಆದೇಶ ಬಂದಿದೆ.
ಸ್ಕರೀಯ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಿಂದ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು, ಈ ನಡುವೆ ಅವರು ಹಲವು ಸಮಯ ಡಿವೈಎಸ್ಪಿ ಸ್ಕಾಡ್ನಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಮತ್ತೆ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಪರಮೇಶ್ವರ ಅವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ವಾರಂಟ್ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.