ಕೊಂಬೆಟ್ಟು ತಾ| ಕ್ರೀಡಾಂಗಣದಲ್ಲಿ ವಿಶ್ವ ಪರಿಸರ ದಿನಾಚರಣೆ

0

  • ಪರಿಸರ ಉಳಿಸುವಲ್ಲಿ ಯುವ ಜನರ ಪಾತ್ರ ಮಹತ್ವದ್ದು: ಸಂಜೀವ ಮಠಂದೂರು

ಪುತ್ತೂರು: ಪರಿಸರ ಹಸಿರಾಗಿದ್ದಷ್ಟು ಮಾನವರಲ್ಲಿ ಆರೋಗ್ಯದ ಸ್ಥಿತಿ ಕೂಡ ಚೆನ್ನಾಗಿ ಇರುತ್ತದೆ ಪರಿಸರ ಉಳಿಸಿ ಬೆಳೆಸುವಲ್ಲಿ ಯುವ ಜನರ ಪಾತ್ರ ಮಹತ್ವದ್ದು ಎಂದು ಪುತ್ತೂರುಶಾಸಕ ಸಂಜೀವ ಮಠಂದೂರು ಹೇಳಿದರು.

ತಾಲೂಕು ಪಂಚಾಯತ್ ಪುತ್ತೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು ಇದರ ವತಿಯಿಂದ ಕೊಂಬೆಟ್ಟು ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಗಿಡ ನೆಡುವ ಮುಖಾಂತರ ಚಾಲನೆ ನೀಡಿ ಮಾತನಾಡಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಭಂಡಾರಿ ಮಾತನಾಡಿ ತಮ್ಮ ಮನೆ ಇನ್ನಿತರ ಸ್ಥಳಗಳಲ್ಲಿ ಗಿಡ ನೆಡುವುದರಿಂದ ಮುಂದಿನ ಪೀಳಿಗೆಗೆ ಸಹಕಾರಿಯಾಗಲಿದೆ ಅದೇ ರೀತಿ ಚುನಾವಣಾ ಅಯೋಗವು ಯಾವುದೇ ಮತದಾರ ಮತದಾನದಿಂದ ಹೊರಗುಳಿಯಬಾರದು ಮರಗಳನ್ನು ಉಳಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ಧ್ಯೇಯ ವಾಕ್ಯದೊಂದಿಗೆ ಪರಿಸರ ದಿನಾಚರಣೆ ಆಚರಿಸುತ್ತಿದೆ ಎಂದು ಹೇಳಿದರು.

ತಾಲ್ಲೂಕು ಯುವಜನ ಒಕ್ಕೂಟದ ಅಧ್ಯಕ್ಷ ದಿನೇಶ್ ಸಾಲಿಯಾನ್, ರಾಷ್ಟ್ರೀಯ ಪ್ರಶಸ್ತಿ ವಿಜೇತ ಶಿಕ್ಷಕ ಸೇರ ಕೋಟಿಯಪ್ಪ ಪೂಜಾರಿ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೆಲ್ವೀಚಾರಕರಾದ ಶ್ರೀಕಾಂತ್ ಬಿರಾವು ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here