ಕಾವು: ಭಾರತ ಸರಕಾರದ ಜಿಲ್ಲಾ ಪ್ರಶಸ್ತಿ ಪುರಸ್ಕೃತ ತುಡರ್ ಯುವಕ ಮಂಡಲ(ರಿ)ನನ್ಯ ಕಾವು ಇದರ ವತಿಯಿಂದ ನನ್ಯ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ದ ಕ ಜಿ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನನ್ಯ, ದಲ್ಲಿ ಸುದೀರ್ಘ 28 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಕೆದಂಬಾಡಿ ಶಾಲೆಗೆ ಮುಖ್ಯಗುರುಗಳಾಗಿ ವರ್ಗಾವಣೆ ಗೊಂಡ ನಾಗವೇಣಿ ಕೆ ಇವರಿಗೆ ಅಭಿನಂದನಾ ಕಾರ್ಯಕ್ರಮ ಜೂ 7 ರಂದು 3 ಗಂಟೆಗೆ ನನ್ಯ ಶಾಲೆಯಲ್ಲಿ ನಡೆಯಲಿದೆ.
ಕಾರ್ಯಕ್ರಮದ ಅಧ್ಯಕ್ಷ ತೆಯನ್ನು ತುಡರ್ ಯುವಕ ಮಂಡಲದ ಅಧ್ಯಕ್ಷ ನವೀನ್ ನನ್ಯ ಪಟ್ಟಾಜೆ ವಹಿಸಲಿದ್ದು, ಅರಿಯಡ್ಕ ಗ್ರಾಮ ಪಂಚಾಯತ್ ನ ಅಧ್ಯಕ್ಷರು ಸೌಮ್ಯ ಬಾಲಸುಬ್ರಹ್ಮಣ್ಯ ಮುಂಡಕೊಚ್ಚಿ ದೀಪ ಪ್ರಜ್ವಲನೆ ಮಾಡಲಿದ್ದು, ಗ್ರಾಮ ಪಂಚಾಯಿತ್ ಸದಸ್ಯರಾದ ಲೋಕೇಶ್ ಚಾಕೋಟೆ ಹಾಗೂ ಜಯಂತಿ ಪಟ್ಟುಮೂಲೆ ಮಕ್ಕಳಿಗೆ ಪುಸ್ತಕ ವಿತರಣೆ ಮಾಡಲಿದ್ದಾರೆ. ನಾಗವೇಣಿ ಕೆ ಇವರು ಅಭಿನಂದನೆ ಸ್ವೀಕರಿಸಲಿದ್ದು,ಬುಶ್ರಾ ವಿದ್ಯಾ ಸಂಸ್ಥೆಯ ಶಿಕ್ಷಕಿ ಹೇಮಲತಾ ಕಜೆಗದ್ದೆ ಅಭಿನಂದನೆ ಮಾಡಲಿದ್ದಾರೆ ಎಂದು ಯುವಕ ಮಂಡಲದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.