ಉಪ್ಪಿನಂಗಡಿ: ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ವತಿಯಿಂದ ಪರಿಸರ ದಿನಾಚರಣೆ

0

ಉಪ್ಪಿನಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಮತ್ತಿತರ ಸಂಘ ಸಂಸ್ಥೆಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಉಪ್ಪಿನಂಗಡಿ ಸರ್ಕಾರಿ ಮಾದರಿ ಶಾಲೆಯಲ್ಲಿ ಜೂ.7ರಂದು ಆಚರಿಸಲಾಯಿತು.

 


ಭಾರತ್ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ ಇದರ ಅಧ್ಯಕ್ಷ ಅಬ್ರಾಹಾಂ ವರ್ಗೀಸ್ ಸಸಿಗೆ ನೀರು ಹಾಕುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿ, ಪರಿಸರ ರಕ್ಷಣೆಯ ಪ್ರತಿಜ್ಞಾ ವಿಧಿ ನೆರವೇರಿಸಲಾಗಿ ಮಾತನಾಡಿ ಮುಂದಿನ ಜನಾಂಗಕ್ಕೆ ಉತ್ತಮ ಪರಿಸರವನ್ನು ಒದಗಿಸುವ ನಮ್ಮೆಲ್ಲರ ಕರ್ತವ್ಯವನ್ನು ನಾವೆಲ್ಲಾ ನಿರ್ವಹಿಸೋಣ. ವಾಯು ಮಾಲಿನ್ಯ ತಡೆಗಟ್ಟುವ ಪರಿಸರ ಸ್ನೇಹಿ ವಾಹನವನ್ನು ಬಳಸುವ ಮೂಲಕ, ನಮ್ಮ ಮನೆ, ರಸ್ತೆ ಬದಿಗಳಲ್ಲಿ ಮರ ಗಿಡಗಳನ್ನು ನೆಡುವ ಮೂಲಕ ಹಸಿರು ಪರಿಸರದ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ವಂದನಾ ಶರತ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಚಂದ್ರ ಮುಳಿಯ, ಶಾಲಾ ಮುಖ್ಯ ಶಿಕ್ಷಕ ಹನುಮಂತಪ್ಪ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರವಿಚಂದ್ರ ಶಾಂತಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ದಿನೇಶ್, ಪಂಚಾಯಿತಿ ಸದಸ್ಯರಾದ ಸಣ್ಣಣ್ಣ, ಯು.ಟಿ. ತೌಸೀಫ್, ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಜಯ ಕುಮಾರ್ ಕಲ್ಲಳಿಕೆ, ಪ್ರಮುಖರಾದ ದಿವಾಕರ ಆಚಾರ್ಯ, ರವೀಂದ್ರ ದರ್ಬೆ, ಮಹಾಲಿಂಗ, ರಕ್ಷಿತ್, ಅರಣ್ಯ ಇಲಾಖಾಧಿಕಾರಿಗಳು, ಆರೋಗ್ಯ ಇಲಾಖೆಯ ಸಂದೀಪ್ ಮತ್ತಿತರರು ಉಪಸ್ಥಿತರಿದ್ದರು. ಸ್ಕೌಟ್ಸ್ ಶಿಕ್ಷಕಿ ಪುಷ್ಪಲತಾ ತಿಲಕ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here