ನೆಲ್ಯಾಡಿ: ಉಚಿತ ನೇತ್ರ ಚಿಕಿತ್ಸೆ, ಶಸ್ತ್ರ ಚಿಕಿತ್ಸಾ ಶಿಬಿರ, ಕನ್ನಡಕ ವಿತರಣೆ

0

ನೆಲ್ಯಾಡಿ: ಲಯನ್ಸ್ ಕ್ಲಬ್ ಆಲಂಕಾರು ದುರ್ಗಾಂಬಾ ಮತ್ತು ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ವೆನ್ಲಾಕ್ ಆಸ್ಪತ್ರೆ ಮಂಗಳೂರು, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ ಇವರ ಸಹಯೋಗದೊಂದಿಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ, ಶಸ್ತ್ರಾ ಚಿಕಿತ್ಸಾ ಶಿಬಿರ ಮತ್ತು ಪುತ್ತೂರು ಆನಂದಾಶ್ರಮ ಸೇವಾಟ್ರಸ್ಟ್ ವತಿಯಿಂದ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮ ನೆಲ್ಯಾಡಿ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಡೆಯಿತು.


ಶಿಬಿರವನ್ನು ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್‌ನ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತುರವರು ನೆರವೇರಿಸಿ ಮಾತನಾಡಿ, ಅಂತರಾಷ್ಟ್ರೀಯ ಸಮಾಜ ಸೇವಾ ಸಂಸ್ಥೆಯಾದ ಲಯನ್ಸ್ ಕ್ಲಬ್‌ನ ಧ್ಯೇಯವಾಕ್ಯವೇ ಸೇವೆಯಾಗಿದೆ. ಉಚಿತ ಚಿಕಿತ್ಸಾ ಶಿಬಿರ ಗ್ರಾಮೀಣ ಭಾಗದ ಜನರಿಗೆ, ಕೃಷಿಕರಿಗೆ, ಕೂಲಿಕಾರ್ಮಿಕರಿಗೆ ವರದಾನವಾಗಿದೆ. ಸಾರ್ವಜನಿಕರ ಕಾಳಜಿಯಿಂದ ಹಮ್ಮಿಕೊಂಡ ಈ ಶಿಬಿರ ಯಶ್ವಸಿಯಾಗಲಿ ಎಂದು ಶುಭ ಹಾರೈಸಿದರು. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನೇತ್ರಾಧಿಕಾರಿ ಡಾ.ಶಾಂತರಾಜ್‌ರವರು ನೇತ್ರ ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ಅಧ್ಯಕ್ಷತೆ ವಹಿಸಿದ್ದ ನೆಲ್ಯಾಡಿ ಜೆಸಿಐ ಅಧ್ಯಕ್ಷೆ ಜಯಂತಿ ಬಿ.ಎಂ.,ಅವರು ಮಾತನಾಡಿ, ಜೇಸಿಐ ಮತ್ತು ಲಯನ್ಸ್ ಕ್ಲಬ್ ಸಮಾಜದ ಎರಡು ಕಣ್ಣುಗಳಿದ್ದಂತೆ. ಸಂಘ ಸಂಸ್ಥೆಗಳು ಸಮಾಜದಲಿರುವ ನೊಂದವರ, ಬಡವರ, ಹಿಂದುಳಿದವರ ಬಗ್ಗೆ ಸಹಾನುಭೂತಿ ಮತ್ತು ಕಾಳಜಿ ಇದ್ದಾಗ ಜನರಿಗೆ ಉಪಯುಕ್ತವಾಗುವ ಇಂತಹ ಶಿಬಿರಗಳು ಸಾರ್ಥಕವಾಗಿ ಉಶ್ವಸಿಯಾಗಿ ಸಮಾಜಕ್ಕೆ ಮುಟ್ಟುತ್ತದೆ. ಶಿಬಿರಕ್ಕೆ ಸಹಕರಿಸಿದ ಎಲ್ಲರಿಗೂ ವಂದನೆಗಳು ಎಂದರು.


ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್‌ನ ಅಧ್ಯಕ್ಷೆ ಡಾ.ಗೌರಿ ಪೈ, 42ನೇ ನೇತ್ರ ಚಿಕಿತ್ಸಾ ಶಿಬಿರದ ಸಂಘಟಕ, ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ, ನೆಲ್ಯಾಡಿ ಗ್ರಾ.ಪಂ. ಉಪಾಧ್ಯಕ್ಷ ಅಬ್ದುಲ್ ಜಬ್ಬಾರ್, ಸದಸ್ಯ ಮೊಹಮ್ಮದ್ ಇಕ್ಬಾಲ್, ಸಮಾಜ ಸೇವಕ ಮಹಮ್ಮದ್ ರಫೀಕ್ ಪ್ರಿಯದರ್ಶಿನಿ, ನೆಲ್ಯಾಡಿ ನೇತ್ರ ತಜ್ಞ ಡಾ. ಭಾನು, ವೆನ್ಲಾಕ್ ಆಸ್ಪತ್ರೆಯ ನೇತ್ರಾಧಿಕಾರಿ ಸಂಚಾರಿ ನೇತ್ರ ಚಿಕಿತ್ಸಾ ಘಟಕದ ಮುಖ್ಯಸ್ಥ ಡಾ. ಅನಿಲ್ ರಾಮಾನುಜಂ, ಆನಂದಾಶ್ರಮ ಸೇವಾ ಟ್ರಸ್ಟ್ ಸದಾನಂದ ವೈ, ಆಲಂಕಾರು ದುರ್ಗಾಂಬಾ ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ, ಅನಂದಾಶ್ರಮದ ಪದಾಧಿಕಾರಿಗಳು, ವೆನ್ಲಾಕ್ ಆಸ್ಪತ್ರೆಯ ನೇತ್ರ ಚಿಕಿತ್ಸಾ ಘಟಕದವರು, ಗ್ರಾಮಸ್ಥರು ಉಪಸ್ಥಿತರಿದ್ದರು.

ನೆಲ್ಯಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಗಂಗಾಧರ ಶೆಟ್ಟಿ ಹೊಸಮನೆ ಸ್ವಾಗತಿಸಿದರು. ಲಯನ್ಸ್ ಕ್ಲಬ್‌ನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ವಂದಿಸಿದರು. ನೆಲ್ಯಾಡಿ ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮಾಜಿ ಅಧ್ಯಕ್ಷ ಸುಧೀರ್ ಕುಮಾರ್ ನಿರೂಪಿಸಿದರು. ಶಿಬಿರದಲ್ಲಿ 250ಕ್ಕೂ ಮಿಕ್ಕಿ ಸಾರ್ವಜನಿಕರು ಭಾಗವಹಿಸಿದರು. 10 ಜನ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರು. ೨೨೫ ಮಂದಿಗೆ ಉಚಿತ ಕನ್ನಡಕಗಳನ್ನು ಆನಂದಾಶ್ರಮದ ಸೇವಾಟ್ರಸ್ಟ್‌ನ ಅಧ್ಯಕ್ಷೆ ಡಾ. ಗೌರಿ ಪೈ ವಿತರಿಸಿದರು.

LEAVE A REPLY

Please enter your comment!
Please enter your name here