ಕಾಣಿಯೂರು: ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ಯೋಗ ಫೆಡರೇಶನ್ ಆಫ್ ಮೈಸೂರು ಸಹಯೋಗದೊಂದಿಗೆ 8 ನೇ ಅಂತರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ಜೂ5ರಂದು ನಡೆದ ಮುಕ್ತ ರಾಷ್ಟ್ರೀಯ ಮಟ್ಟದ ಯೋಗಾಸನ ಚಾಂಪಿಯನ್‌ಶಿಪ್ ನಲ್ಲಿ 11 ರಿಂದ 14 ರ ವಯೋಮಿತಿಯ ಬಾಲಕರ ವಿಭಾಗದಲ್ಲಿ ಮೋನಿಷ್ ತಂಟೆಪ್ಪಾಡಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ 6ನೇ ತರಗತಿಯ ವಿದ್ಯಾರ್ಥಿಯಾಗಿರುವ ಮೋನಿಷ್ ರವರು ಪ್ರಗತಿ ವಿದ್ಯಾಸಂಸ್ಥೆಯ ಯೋಗ ಶಿಕ್ಷಕರಾದ ಶರತ್ ಮರ್ಗಿಲಡ್ಕರವರು ಮಾರ್ಗದರ್ಶನ ನೀಡಿರುತ್ತಾರೆ. ಮೋನಿಷ್ ತಂಟೆಪ್ಪಾಡಿ ವಿಶ್ವನಾಥ ಮತ್ತು ದಯಾಮಣಿ ದಂಪತಿಗಳ ಪುತ್ರ.