ಕಾಣಿಯೂರು: ಬಿಜೆಪಿ ಚುನಾಯಿತ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಕಾರ್ಯಕ್ರಮ

0

  • ಅಭಿವೃದ್ಧಿ ಪರ ಆಡಳಿತದಿಂದ ಬಿಜೆಪಿ ಬೆಳೆದು ನಿಂತಿದೆ- ಎಸ್ ಅಂಗಾರ


ಕಾಣಿಯೂರು: ಧಾರ್ಮಿಕ, ಸಾಂಸ್ಕೃತಿಕವಾದ ನೆಲೆಗಟ್ಟು ಬಿಜೆಪಿ ಪಕ್ಷದಲ್ಲಿದೆ. ಈ ಉದ್ದೇಶವನ್ನು ಇಟ್ಟುಕೊಂಡೇ ಇವತ್ತು ಬಿಜೆಪಿಯನ್ನು ಜನ ಬೆಂಬಲಿಸುತ್ತಿದ್ದಾರೆ. ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡಬೇಕಾದದ್ದು ಚುನಾಯಿತ ಪ್ರತಿನಿಧಿಗಳಾದ ನಮ್ಮ ಕರ್ತವ್ಯವಾಗಿದೆ. ಜನರ ಸಮಸ್ಯೆಗಳಿಗೆ ಸಮರ್ಪಕ ರೀತಿಯಲ್ಲಿ ಸ್ಪಂದಿಸಿದ ಕಾರಣ ಇವತ್ತು ಬಿಜೆಪಿ ಪಕ್ಷದ ಗೆಲುವಿಗೆ ಕಾರಣವಾಗುತ್ತಿದೆ ಎಂದು ಸಚಿವ ಎಸ್.ಅಂಗಾರ ಹೇಳಿದರು. ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ವತಿಯಿಂದ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ಬಿಜೆಪಿ ಚುನಾಯಿತ ಜನಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿಂದೂ ಪರ ಯೋಚನೆ ಮಾಡುವ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಬೇಕಾದ ಅನಿವಾರ್ಯತೆಯಿದೆ ಎಂದ ಸಚಿವರು ಕಾರ್ಯಕರ್ತರ ನಿರಂತರ ಶ್ರಮ, ಅಭಿವೃದ್ಧಿ ಪರವಾದ ಆಡಳಿತದಿಂದ ಇಂದು ಬಿಜೆಪಿ ದೇಶಾದ್ಯಂತ ಬೆಳೆದು ನಿಂತಿದೆ. ಪಕ್ಷದ ಸಿದ್ದಾಂತಗಳನ್ನು ಪಾಲಿಸಿಲೊಂಡು ನಾವು ಮುಂದುವರಿಯುವ. ಪಕ್ಷದ ಸಾಮಾನ್ಯ ಕಾರ್ಯಕರ್ತನೇ ಪಕ್ಷದ ಆಸ್ತಿ. ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನಾವೆಲ್ಲಾ ಜೊತೆಯಾಗಿ ಸಾಗೋಣ ಎಂದರು. ಬಿಜೆಪಿ ಬೆಳೆದು ಬಂದ ದಾರಿಯ ಕುರಿತು ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠ ಸಂಚಾಲಕ ಕೃಷ್ಣ ಶೆಟ್ಟಿ ಕಡಬ ಹೇಳೀದರು. ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ ಸ್ವಾಗತಿಸಿ, ಸುಳ್ಯ ಮಂಡಲ ಸಮಿತಿ ಸದಸ್ಯೆ ಉಮೇಶ್ವರಿ ಅಗಳಿ ವಂದಿಸಿದರು. ಸುಳ್ಯ ಮಂಡಲ ಸಮಿತಿ ಕಾರ್ಯದರ್ಶಿ ಇಂದಿರಾ ಬಿ.ಕೆ, ಪುಣ್ಚಪ್ಪಾಡಿ ಶಕ್ತಿ ಕೇಂದ್ರದ ಪ್ರಮುಖ್ ಮಹೇಶ್ ಸವಣೂರು ಕಾರ್ಯಕ್ರಮ ನಿರೂಪಿಸಿದರು.

ಸಮಾರೋಪ ಸಮಾರಮಭ: ಸಂಜೆ ನಡೆದ ಪ್ರಶಿಕ್ಷಣ ವರ್ಗ ಕಾರ್ಯಕ್ರಮದ ಸಮಾರೋಪ ಸಮಾರಮಭದಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಧಾಕೃಷ್ಣ ಬುಡಿಯಾರ್, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಮ್‌ದಾಸ್ ಬಂಟ್ವಾಳ, ಸುಳ್ಯ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಸುಳ್ಯ ಮಂಡಲ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಸುರೇಶ್ ಕನೆಮರಡ್ಕ, ಸುಳ್ಯ ಮಂಡಲ ಪ್ರಶಿಕ್ಷಣ ಪ್ರಕೋಷ್ಠದ ಸಹ ಸಂಚಾಲಕ ಗಿರಿಶಂಕರ ಸುಲಾಯ, ಸವಣೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಉದನಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here