ಪುತ್ತೂರು: ನಿವೃತ್ತ ಫಾರೆಸ್ಟರೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಳಮೊಗ್ರು ಗ್ರಾಮದ ಬೊಳ್ಳಾಡಿಯಿಂದ ವರದಿಯಾಗಿದೆ. ನಿವೃತ್ತ ಫಾರೆಸ್ಟರ್ ಶೀನಪ್ಪ ಗೌಡ (75ವ) ಎಂಬವರು ಜೂ.08 ರಂದು ರಾತ್ರಿ ಮನೆಯ ಕೋಣೆಯಲ್ಲಿ ಫ್ಯಾನ್ಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.