ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ‘ವಿದ್ಯಾರ್ಥಿ ಸಂಚಯಿಕಾ’ ಬಿಡುಗಡೆ

0

ಕಡಬ: ವಿದ್ಯಾರ್ಥಿಗಳಲ್ಲಿ ಹಣ ಉಳಿತಾಯದ ಹವ್ಯಾಸ ಬೆಳೆಸುವ ಹಾಗೂ ಅನಗತ್ಯ ಖರ್ಚಿಗೆ ಕಡಿವಾಣ ಹಾಕುವ ಉದ್ದೇಶದಿಂದ ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿಯ ಆಡಳಿತಕ್ಕೊಳಪಟ್ಟ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ‘ಸಂಚಯಿಕಾ’ವನ್ನು ಆಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀಕೃಷ್ಣ ಶರ್ಮ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು. ಶಾಲಾ ಮುಖ್ಯಗುರು ಗಣಪತಿ ಭಟ್ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here