ಹೆಚ್ಚುತ್ತಿರುವ ಕೊರೋನಾ:ಹೊಸ ಮಾರ್ಗಸೂಚಿ ಪ್ರಕಟ

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ

ಬೆಂಗಳೂರು:ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯ ಏರಿಕೆಯನ್ನು ಗಮನಿಸಲಾಗಿದೆ.ಜೂ.9ರಂದು 471 ಪ್ರಕರಣಗಳು ಹಾಗೂ ಪಾಸಿಟಿವ್ ಪ್ರಮಾಣ ಶೇ.2.14ರಷ್ಟು ವರದಿಯಾಗಿದೆ.ಕೋವಿಡ್-19ನ ಮೂರನೇ ಅಲೆಯ ನಂತರದ ಅವಽಯ ಏರಿಕೆ ಇದಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹೊಸ ಮಾರ್ಗಸೂಚಿಗಳು:

ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಸಲಾಗಿದೆ. ಈ ಕ್ರಮವನ್ನು ಜಾರಿಗೊಳಸಲು ಮಾರ್ಷಲ್/ ಪೋಲೀಸ್ ಸಿಬ್ಬಂದಿಗಳ ಸಹಾಯವನ್ನು ಪಡೆಯುವುದು.

ಮುಚ್ಚಿದ ಸಂರಚನೆಯನ್ನು ಹೊಂದಿದ ಸ್ಥಳಗಳಾದ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಪಬ್‌ಗಳು, ಕೆ-ಟೀರಿಯಾ, ಹೊಟೇಲ್‌ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‌ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸುವುದು ಹಾಗೂ ಮಾಸ್ಕ್ ಧರಿಸಿ ಬರುವವರಿಗೆ ಮಾತ್ರವೇ ಪ್ರವೇಶ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಸಂಸ್ಥೆಯ ಮಾಲಕರ/ಆಡಳತಗಳ ಜವಾಬ್ದಾರಿಯಾಗಿರುತ್ತದೆ.

ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ(ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

ILI & SARI ಲಕ್ಷಣಗಳನ್ನು ಹೊಂದಿದವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡುವುದು ಹಾಗೂ -ಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿರುವುದು.

ಅರ್ಹ ಜನರೆಲ್ಲರೂ Precautionary dose ಸೇರಿದಂತೆ, ಕೋವಿಡ್ 19 ಲಸಿಕೆಯನ್ನು ಪಡೆಯುವುದು. ಕೋವಿಡ್ 19 ಮುಂಜಾಗ್ರತಾ ಕ್ರಮವಾಗಿ ಮೇಲೆ ತಿಳಿಸಿದ ಅಂಶಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಸುವ ನಿಟ್ಟಿನಲ್ಲಿ ಅಽಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.