ವಿಟ್ಲ: ಹಿಂದೂ ಜಾಗೃತಿ ಸಭೆಯಲ್ಲಿ ಮುಸ್ಲಿಂ ಧರ್ಮವನ್ನು ಅವಹೇಳನಕಾರಿಯಾಗಿ ಬಿಂಬಿಸಿದ ಆರೋಪ- ರಾಧಾಕೃಷ್ಣ ಅಡ್ಯಂತಾಯ, ಕಾರ್ಯಕ್ರಮ ಆಯೋಜಕರ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

0

ವಿಟ್ಲ: ವಿಟ್ಲದಲ್ಲಿ ನಡೆದ ಹಿಂದೂ ಜಾಗೃತಿ ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಶಿಕ್ಷಣ್ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯರವರು ಮುಸ್ಲಿಂ ಧರ್ಮವನ್ನು ಅವಹೇಳನಕಾರಿಯಾಗಿ ಬಿಂಬಿಸಿ ಸಾಮಾಜಿಕ ಅಶಾಂತಿ ಸೃಷ್ಟಿಸಲು ಯತ್ನಿಸಿದ್ದಾರೆ  ಎಂದು ಆರೋಪಿಸಿ ವಿಟ್ಲಮುಡ್ನೂರು ಗ್ರಾಮದ ಕಂಬಳಬೆಟ್ಟು ನಿವಾಸಿ ಟಿ. ಮಹಮ್ಮದ್‌ರವರ ಪುತ್ರ, ವಿಟ್ಲ ಇಸ್ಲಾಂ ಒಕ್ಕೂಟ ಸದಸ್ಯ ಅಬ್ದುಲ್ ರಹಿಮಾನ್ ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲ ಕಸಬಾ ಗ್ರಾಮದ ವಿಟ್ಲ ಕೆ.ಎಸ್.ಆರ್.ಟಿ.ಸಿ ಬಸ್ಸು ನಿಲ್ದಾಣದ ಬಳಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ಹಾಗೂ ಹಿಂದೂ ಜಾಗರಣ ವೇದಿಕೆ ವಿಟ್ಲ ಆಶ್ರಯದಲ್ಲಿ ಜೂ.೬ರಂದು ನಡೆದ ಬೃಹತ್ ಹಿಂದು ಜಾಗೃತಿ ಸಭೆಯಲ್ಲಿ  ಹಿಂದೂ ಜಾಗರಣ ವೇದಿಕೆ ಪ್ರಾಂತ ಪ್ರಶಿಕ್ಷಣ್ ಪ್ರಮುಖ್ ರಾಧಾಕೃಷ್ಣ ಅಡ್ಯಂತಾಯ ರವರು  ತನ್ನ ಭಾಷಣದಲ್ಲಿ ಇಸ್ಲಾಂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿರುತ್ತಾರೆ. ಇದರಿಂದಾಗಿ ಸಮಾಜದಲ್ಲಿ ಅಶಾಂತಿ ಉಂಟಾಗಿ ಸಮಾಜದ ಸಾಮರಸ್ಯಕ್ಕೆ ದಕ್ಕೆ ಉಂಟಾಗಿದೆ ಎಂದು ದೂರಿನಲ್ಲಿ ಆರೋಪಿಸಿ, ರಾಧಾಕೃಷ್ಣ ಅಡ್ಯಂತಾಯ ಮತ್ತು ಸಮಾವೇಶ ಸಂಘಟಕರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅವರು ನೀಡಿದ ದೂರಿನಲ್ಲಿ ಕೋರಿದ್ದರು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here