ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ಕಾರ್ಯಾಗಾರ

ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದಲ್ಲಿ 9  ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆಗೊಳಿಸುವ ಉದ್ದೇಶದಿಂದ ನ್ಯಾಷನಲ್ ಟ್ಯಾಲೆಂಟ್ ಸರ್ಚ್ ಎಕ್ಸಾಮಿನೇಷನ್ {ಎನ್.ಟಿ.ಎಸ್.ಇ.) ತರಗತಿಗಳನ್ನು ಆರಂಭಿಸುವ ನಿಟ್ಟಿನಲ್ಲಿ ಮಾಹಿತಿಯನ್ನು ನೀಡಲು ಪಾಲಕರಿಗೆ ಮಾಹಿತಿ ಕಾರ್ಯಾಗಾರವನ್ನು ನಡೆಸಲಾಯಿತು.

 

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಮಕುಂಜೇಶ್ವರ ಪ್ರೌಢಶಾಲೆಯ ವಿಜ್ಞಾನ ಶಿಕ್ಷಕರಾಗಿರುವ  ವೆಂಕಟೇಶ ದಾಮ್ಲೆ ಇವರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದರಿಂದ ಆಗುವ ಪ್ರಯೋಜನೆಗಳು ಮತ್ತು ಅದಕ್ಕಾಗಿ ನಡೆಸಬೇಕಾದ ಸಿದ್ಧತೆಗಳ ಕುರಿತು ತಿಳಿಸಿಕೊಟ್ಟರು . ಈಗಾಗಲೇ ಎನ್.ಟಿ.ಎಸ್.ಇ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ವಿದ್ಯಾರ್ಥಿ ವೇತನವನ್ನು ಪಡೆಯುತ್ತಿರುವ ಬಹುಮುಖ ಪ್ರತಿಭೆ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಆಶ್ರಯ ತಾವು ನಡೆಸಿದ ಪರೀಕ್ಷಾ ಸಿದ್ಧತೆಯ ಕುರಿತು ಮಾಹಿತಿಯನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ೯ ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳು, ಅವರ ಪಾಲಕರು ಹಾಗೂ ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯಗುರುಗಳಾದ  ವೀಣಾ ಆರ್ ಪ್ರಸಾದ್ ಸ್ವಾಗತಿಸಿ, ಸಹಶಿಕ್ಷಕಿ ದಿವ್ಯ ವಂದಿಸಿ,  ಸುಜಾತ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.