ಚಂದಳಿಕೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

0

ವಿಟ್ಲ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವವ ಮೃತದೇಹ ಅವರ ಮನೆ ಸಮೀಪ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತರನ್ನು ವಿಟ್ಲ ಚಂದಳಿಕೆ ಮಾಡತ್ತಡ್ಕ ನಿವಾಸಿ ಜಯಕರ(35 ವ.) ಎಂದು ಗುರುತಿಸಲಾಗಿದೆ. ಜಯಕರ ರವರು ಮೇಸ್ತ್ರಿ ಕೆಲಸ ನಿರ್ವಹಿಸುತ್ತಿದ್ದು, ಜೂ.೧11ರಂದು ಮುಂಜಾನೆಯಿಂದ ನಾಪತ್ತೆಯಾಗಿದ್ದರು. ಅವರಿಗಾಗಿ ವಿವಿಧೆಡೆ ಹುಡುಕಾಟ ನಡೆಸಿದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಅವರ ಮನೆಯವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಸಂಜೆ ಅವರ ಮೃತದೇಹ ಮಾಡತ್ತಡ್ಕ ಸಮೀಪ ಗುಡ್ಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here