ಬನ್ನೂರು ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಕಾನೂನು ಮಾಹಿತಿ

0

ಪುತ್ತೂರು: ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು, ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯ ಬನ್ನೂರು, ಮಹಿಳಾ ಆರಕ್ಷಕ ಠಾಣೆ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮವು ಜೂ.12ರಂದು ಬನ್ನೂರು ಬಾಲಕಿಯರ ವಸತಿ ನಿಲಯದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷರು, ನ್ಯಾಯವಾದಿ ಹರಿಣಾಕ್ಷಿ ಜೆ.ಶೆಟ್ಟಿಯವರು ಮಾತನಾಡಿ, ನಾಗರಿಕ ಹಕ್ಕುಗಳು ಹಾಗೂ ಜವಾಬ್ದಾರಿಗಳು ಬಗ್ಗೆ ಮಾಹಿತಿಯನ್ನು ನೀಡಿದರು. ಮಹಿಳಾ ಠಾಣಾ ಉಪನಿರೀಕ್ಷಕಿ ಸೇಸಮ್ಮರವರು ಸೈಬರ್ ಕ್ರೈಂ ಮತ್ತು ಮಕ್ಕಳ ರಕ್ಷಣೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಶಿಕ್ಷಣ ಸಂಪನ್ಮೂಲ ಒಕ್ಕೂಟಗಳ ಪ್ರಧಾನ ಕಾರ್ಯದರ್ಶಿಯಾಗಿರುವ ವತ್ಸಲಾ ನಾಯಕ್ ಹಾಡಿನೊಂದಿಗೆ ಮಕ್ಕಳ ಜವಾಬ್ದಾರಿ ಏನು ಎಂಬುದನ್ನು ತಿಳಿಸಿದರು.

ನಗರಸಭಾ ಸದಸ್ಯೆ ಮೋಹಿನಿ ವಿಶ್ವನಾಥ ಗೌಡ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸದಸ್ಯೆ ಪ್ರೇಮಲತಾ ನಂದಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ನ್ಯಾಯವಾದಿ ರಾಜೇಶ್ವರಿ ಪ್ರಾರ್ಥಸಿದರು. ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿ ಗೀತಾ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ನಿರೀಕ್ಷ ಸಿ ಇವರು ಕಾರ್ಯಕ್ರಮ ನಿರೂಪಿಸಿದರು. ಸುಮಾರು ೫೫ ಹೆಣ್ಣುಮಕ್ಕಳು ಕಾನೂನು ಮಾಹಿತಿ ಶಿಬಿರದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here