ಗೋಳಿತ್ತಟ್ಟು ಶಾಲೆಯಲ್ಲಿ ಪರಿಸರ ಸಂರಕ್ಷಣೆ ಮಾಹಿತಿ, ಬೀಜ ಬಿತ್ತನೆ

0

 

ನೆಲ್ಯಾಡಿ: ಗೋಳಿತ್ತಟ್ಟು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಇಕೋಕ್ಲಬ್ ವತಿಯಿಂದ ಪರಿಸರ ದಿನಾಚರಣೆಯ ಅಂಗವಾಗಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ “ಪರಿಸರ ಸಂರಕ್ಷಣೆಯ ಬಗ್ಗೆ ಮಾಹಿತಿ ಹಾಗೂ ಬೀಜ ಬಿತ್ತನೆ” ಕಾರ್ಯಕ್ರಮ ನಡೆಯಿತು.

 

ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಸಂದೀಪ್ ಕೆ.,ರವರು ಪರಿಸರ ಸಂರಕ್ಷಣೆಯ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ 2022ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯ “ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಸುಸ್ಥಿರವಾಗಿ ಬದುಕುವುದು” ಇದರ ಔಚಿತ್ಯವನ್ನು ತಿಳಿಸಿ, ಪರಿಸರವನ್ನು ನಮಗೆ ನಮ್ಮ ಪೂರ್ವಜರಿಂದ ಸಾಲವಾಗಿ ಪಡೆದುಕೊಂಡಿದ್ದೇವೆ. ಆ ಸಾಲವನ್ನು ಸುಸ್ಥಿರವಾಗಿ ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಿಟ್ಟುಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಶಾಲಾ ಮುಖ್ಯಗುರು ಜಯಂತಿ ಬಿ.ಎಂ.,ರವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳು ಸಂಗ್ರಹಿಸಿದ ಹಾಗೂ ಅರಣ್ಯ ಇಲಾಖೆಯು ನೀಡಿದ ಸುಮಾರು ನೂರಕ್ಕಿಂತಲೂ ಹೆಚ್ಚಿನ ವಿವಿಧ ಜಾತಿಯ ಮರಗಳ ಬೀಜಗಳನ್ನು ಶಾಲಾ ಸಮೀಪದ ಅರಣ್ಯದಲ್ಲಿ ಬಿತ್ತನೆ ಮಾಡಲಾಯಿತು. ಕಾರ್ಯಕ್ರದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಗೋಪಾಲ ಗೌಡ, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷ ಜನಾರ್ದನ ಗೌಡ ಪಠೇರಿ, ಸದಸ್ಯರಾದ ಬಾಬು ಪೂಜಾರಿ, ಜೀವಿತ, ಎ.ಪಿ.ಎಂ.ಸಿ. ಸದಸ್ಯ ಕುಶಾಲಪ್ಪ ಗೌಡ ಅನಿಲ, ಅರಣ್ಯ ಇಲಾಖೆಯ ಗಾರ್ಡ್ ರಾಜೇಶ್ ಸೇರಿದಂತೆ ಶಾಲಾ ಎಸ್. ಡಿ.ಎಂ.ಸಿ. ಸದಸ್ಯರು ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ಹಂಚಲಾಯಿತು.


LEAVE A REPLY

Please enter your comment!
Please enter your name here