ಪೆರಿಯಶಾಂತಿ: ಟಿಟಿ ಮೇಲೆ ಬಿದ್ದ ಮರ, ಪ್ರಯಾಣಿಕರು ಪಾರು

0

ನೆಲ್ಯಾಡಿ: ಚಲಿಸುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆ ಮರ ಬಿದ್ದ ಪರಿಣಾಮ ವಾಹನ ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಪೆರಿಯಶಾಂತಿಯಲ್ಲಿ ಜೂ.12ರಂದು ಸಂಜೆ ನಡೆದಿದೆ.

 


ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದವರಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆಯೇ ಪೆರಿಯಶಾಂತಿ ಸಮೀಪ ರಸ್ತೆಯ ಪಕ್ಕದಲ್ಲಿದ್ದ ಮರವೊಂದು ಮುರಿದು ಬಿದ್ದಿದೆ. ಘಟನೆಯಲ್ಲಿ ಟೆಂಪೋ ಟ್ರಾವೆಲ್ಲರ್ ಜಖಂಗೊಡಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸಂಜೆ ಸುರಿದ ಭಾರೀ ಮಳೆಯಿಂದಾಗಿ ಮರ ಮುರಿದು ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಟ್ರಾವೆಲ್ಲರ್ ಮೇಲೆಯೇ ಬಿದ್ದಿದೆ. ಘಟನೆಯಿಂದಾಗಿ ಹೆದ್ದಾರಿಯಲ್ಲಿವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳಕ್ಕೆ ಆಗಮಿಸಿದ ನೆಲ್ಯಾಡಿ ಹೊರಠಾಣೆ ಪೊಲೀಸರು ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಭಾರೀ ಗಾಳಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ಅಲ್ಲಲ್ಲಿ ಮರಗಳು ಮುರಿದು ಬಿದ್ದಿರುವುದಾಗಿಯೂ ವರದಿಯಾಗಿದೆ.

LEAVE A REPLY

Please enter your comment!
Please enter your name here