ರಾಮಕುಂಜ ಮಹಾವಿದ್ಯಾಲಯದಲ್ಲಿ ಯೋಗ ಶಿಬಿರದ ಉದ್ಘಾಟನೆ

0

ರಾಮಕುಂಜ: ಯೋಗದಿಂದ ಹಲವಾರು ರೋಗಗಳಿಂದ ಮುಕ್ತಿ ಪಡೆಯಬಹುದು. ಅತ್ಯುತ್ತಮ ಆರೋಗ್ಯಕ್ಕಾಗಿ ಯೋಗ ಅತಿ ಅಗತ್ಯ ಎಂದು ಉಜಿರೆ ಎಸ್‌ಡಿಎಮ್ ನ್ಯಾಚುರೋಪತಿ ಮತ್ತು ಯೋಗಿಕ್ ಸೈನ್ಸ್ ಕಾಲೇಜ್ ಆಂಡ್ ಹಾಸ್ಪಿಟಲ್‌ನ ಪ್ರೊಫೆಸರ್ ಡಾ. ಗೀತಾ ಶೆಟ್ಟಿ ಹೇಳಿದರು.


ಅವರು ಪ್ರಾಯಪಟ್ಟರು. ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ ಹಾಗೂ ರಾಮಕುಂಜೇಶ್ವರ ಮಹಾವಿದ್ಯಾಲಯ ರಾಮಕುಂಜ ಜಂಟಿ ಆಶ್ರಯದಲ್ಲಿ ನಡೆಯುವ ಯೋಗ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಮುಖ ಅಭ್ಯಾಗತರಾಗಿ ಭಾಗವಹಿಸಿ ಮಾತನಾಡಿದರು. ರಾಮಕುಂಜ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಾಲತಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸಂಚಾಲಕ ನಾರಾಯಣ ಭಟ್ ಟಿ., ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗೋಳಿತೊಟ್ಟು ವಲಯದ ಮೇಲ್ವಿಚಾರಕಿ ಸುಜಾತ, ರಾಮಕುಂಜ ಗ್ರಾಮ ಪಂಚಾಯತ್ ಸದಸ್ಯೆ ಆಯಿಷ ಶರೀಫ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ರಾಧಾಕೃಷ್ಣ ಕೆ.ಎಸ್, ಕಾಲೇಜಿನ ಉಪನ್ಯಾಸಕ ವೃಂದದವರು, ಸಾರ್ವಜನಿಕರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ಅದಿತಿ ಪ್ರಾರ್ಥಿಸಿದರು. ಉಪನ್ಯಾಸಕ ದಿವಾಕರ ಕೆ. ವಂದಿಸಿದರು. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ಪ್ರಾಂಶುಪಾಲ ಗಣರಾಜ ಕುಂಬ್ಳೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here