ಕೊಳ್ತಿಗೆ: ಬಿಜೆಪಿ ಶಕ್ತಿ ಕೇಂದ್ರದಿಂದ ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

0

ಪುತ್ತೂರು: ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರ 8 ವರ್ಷಗಳ ಅಭೂತಪೂರ್ವ ಆಡಳಿತ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಪ್ರಯುಕ್ತ ಸೇವೆ, ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮದಡಿ ಬಿಜೆಪಿ ಶಕ್ತಿ ಕೇಂದ್ರ ಕೊಳ್ತಿಗೆ ಇದರ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಶೇ.90 ಕ್ಕಿಂತ ಹೆಚ್ಚಿನ ಅಂಕಗಳಿಸಿದ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ಹಾಗೂ ಗ್ರಾಮದಲ್ಲಿ ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಬೆಡ್ ಶೀಟ್ ಹಾಗೂ ಕೊಡೆಗಳನ್ನು ಹೊಂದಿದ ಕಿಟ್‌ಗಳನ್ನು ಜೂ.11ರಂದು ಪೆರ್ಲಂಪಾಡಿಯ ಅಂಬೇಡ್ಕರ್ ಭವನದಲ್ಲಿ ವಿತರಿಸಲಾಯಿತು.

ವೇದಿಕೆಯಲ್ಲಿ ಕೊಳ್ತಿಗೆ ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಸತೀಶ್ ಪಾಂಬಾರು, ದಕ್ಷಿಣ ಕನ್ನಡ ಜಿಲ್ಲಾ ಒ.ಬಿ.ಸಿ ಮೋರ್ಚಾ ಅಧ್ಯಕ್ಷರಾದ ಆರ್.ಸಿ ನಾರಾಯಣ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿ ನಿತೀಶ್ ಶಾಂತಿವನ, ಕೊಳ್ತಿಗೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ನಾಗವೇಣಿ, ಸದಸ್ಯರಾದ ಯತೀಂದ್ರ ಗೌಡ ಕೊಚ್ಚಿ, ನೆಟ್ಟಣಿಗೆ ಮುಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ತೀರ್ಥಾನಂದ ಗೌಡ ದುಗ್ಗಳ ಉಪಸ್ಥಿತರಿದ್ದರು.

ಪಕ್ಷದ ಮುಖಂಡರುಗಳು, ಪಕ್ಷದ ವಿವಿಧ ಜವಾಬ್ದಾರಿ ಹೊಂದಿರುವ ಪ್ರಮುಖರು, ಕಾರ್ಯಕರ್ತರು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಂಡಿದ್ದರು. ಬಿಜೆಪಿ ಯುವ ಮೋರ್ಚಾ ನರಿಮೊಗರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ದುಗ್ಗಳ ಸ್ವಾಗತಿಸಿ, ಬಿಜೆಪಿ ಬೂತ್ ಕಾರ್ಯದರ್ಶಿ ಅಶೋಕ್ ಒರ್ಕೊಂಬು ವಂದಿಸಿದರು. ಪ್ರಭಾಕರ ರೈ ಕೊಂರ್ಬಡ್ಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here