ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ-ಕಾನೂನು ಅರಿವು ಕಾರ್ಯಕ್ರಮ

0

ಪುತ್ತೂರು:ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲ ಸಂಘ, ಶಿಕ್ಷಣ ಸಂಪನ್ಮೂಲ ಕೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರದ ವಾರ್ಷಿಕ ಮಹಾಸಭೆಯ ಪ್ರಯಕ್ತ ಕಾನೂನು ಅರಿವು ಕಾರ್ಯಕ್ರಮವು ಜೂ.14ರಂದು ಪರಾಶರ ವಕೀಲರ ಸಭಾ ಭವನದಲ್ಲಿ ನಡೆಯಿತು.



ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆರ್.ಓಂಕಾರಪ್ಪ ಮಾತನಾಡಿ, ಕಾನೂನು ಮಾಹಿತಿಯನ್ನು ಪ್ರತಿಯೊಬ್ಬರು ಆವಶ್ಯಕವಾಗಿ ತಿಳಿಯಬೇಕಾಗಿದೆ. ಕಾನೂನು ಮಾಹಿತಿ ಹಮ್ಮಿಕೊಂಡಿರುವುದನ್ನು ಶ್ಲಾಘಿಸಿದರು. ಮುಖ್ಯ ಅತಿಥಿಯಾಗಿದ್ದ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ನ್ಯಾಯಿಕ ದಂಡಾಧಿಕಾರಿ ಶ್ರೀಗೌಡ ಆರ್.ಪಿ ಮಾತನಾಡಿ, ಶಿಕ್ಷಣ ಮತ್ತು ಸಂಪನ್ಮೂಲ ಒಂದಕ್ಕೊಂದು ಪೂರಕವಾಗಿದೆ. ನಮ್ಮ ಜೀವನಕ್ಕೆ ನೀರು, ಗಾಳಿ, ಆಹಾರ ಎಷ್ಟು ಆವಶ್ಯಕವೋ ಕಾನೂನೂ ನಮ್ಮ ಜೀವನದಲ್ಲಿ ಅಷ್ಟೇ ಆವಶ್ಯಕ. ನಮ್ಮ ನೆಲದ ಕಾನೂನುನನ್ನು ಅರಿತುಕೊಳ್ಳಬೇಕು. ಕಾನೂನು ಮಾಹಿತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿ ಎಂದರು.

ವಕೀಲರ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಕೆ. ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ, ವಕೀಲರ ಸಂಘದ ಜತೆ ಕಾರ್ಯದರ್ಶಿ ಸೀಮಾ ನಾಗರಾಜ್, ಸಂಪನ್ಮೂಲ ವ್ಯಕ್ತಿ ವಿದ್ಯಾ ಶಾರದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ ಸ್ವಾಗತಿಸಿದರು. ನ್ಯಾಯವಾದಿ ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿ, ವಕೀಲ ಸಂಘದ ಖಜಾಂಚಿ ಶ್ಯಾಮ್ ಪ್ರಸಾದ್ ಕೈಲಾರ್ ವಂದಿಸಿದರು.

ಮಹಾಸಭೆ, ಕಾನೂನು ಮಾಹಿತಿ:
ಸಭಾ ಕಾರ್ಯಕ್ರಮದ ಬಳಿಕ ಕಾನೂನು ಮಾಹಿತಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಮಹಾಸಭೆ, ಕಾನೂನು ಮಾಹಿತಿ ಕಾರ್ಯಕ್ರಮಗಳು ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ವಿದ್ಯಾ ಶಾರದ ಮಕ್ಕಳ ಶಿಕ್ಷಣ ಕಾಯಿದೆಯ ಬಗ್ಗೆ ಮಾಹಿತಿ ನೀಡಿದರು. ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷ ಹರಿಣಾಕ್ಷಿ ಜೆ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಅಬೂಬಕ್ಕರ್ ಆರ್ಲಪದವು, ಕೋಶಾಧಿಕಾರಿ ಇಸ್ಮಾಯಿಲ್ ನೆಲ್ಯಾಡಿ, ವತ್ಸಲಾ ನಾಯಕ್ ಸುಮಂಗಲಾ ಶೆಣೈ, ನಿಕಟಪೂರ್ವ ಅಧ್ಯಕ್ಷ ನಯನಾ ರೈ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here