ಬಂಟ್ವಾಳ ಶಾಸಕರಿಂದ ವಿಟ್ಲಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಾಗಾರಿ ಉದ್ಘಾಟನೆ: ಕೋವಿಡ್ ಸಂಕಷ್ಟದ ನಡುವೆಯೂ ಹಲವಾರು ಸಮಾಜಮುಖಿ ಕಾರ್ಯಗಳು ನಡೆದಿದೆ: ರಾಜೇಶ್ ನಾಯ್ಕ

0

ವಿಟ್ಲ: ಗ್ರಾಮದ ಅಭಿವೃದ್ಧಿಯೇ ನಮ್ಮ ಅಧಿಕಾರದ ಮೂಲಮಂತ್ರವಾಗಿದ್ದು , ಕೋವಿಡ್ ಸಂಕಷ್ಟದ ಮಧ್ಯೆಯೂ ನಾವು ಕೋಟ್ಯಾಂತರ ರೂಪಾಯಿ ಅನುದಾನ ನೀಡುವ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದೇವೆ ಎಂದು ಶಾಸಕ ರಾಜೇಶ್ ನಾಯ್ಕ್ ಅವರು ಹೇಳಿದರು.

ಅವರು ಜೂ.13ರಂದು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 50 ಲಕ್ಷ ರೂಪಾಯಿ ಅನುದಾನದಲ್ಲಿ ವಿವಿಧ ಕಾಮಗಾರಿ ಗಳ ಉದ್ಘಾಟನೆ ನಡೆಸಿ ಬಳಿಕ ವಿಟ್ಲ ಪಡ್ನೂರು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಾತಿ, ಮತ ಬೇಧವಿಲ್ಲದೆ ಪ್ರತಿಯೊಬ್ಬರಿಗೂ ಸರಕಾರ ಅನೇಕ ಜನಪರ ಯೋಜನೆಗಳನ್ನು ನೀಡಿದೆ. ಸಾಮಾನ್ಯ ಜನರಿಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ಗ್ರಾ.ಪಂ.ಸದಸ್ಯರು ಮನೆಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು. 14 ಕೋಟಿ ರೂಪಾಯಿ ಅನುದಾನವನ್ನು ವಿಟ್ಲ ಪಡ್ನೂರು ಗ್ರಾ.ಪಂ.ಗೆ ಒದಗಿಸಿ ದ್ದು, ಇನ್ನೂ ಕೋಟ್ಯಾಂತರ ರೂ ಅನುದಾನದ ಮೂಲಕ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ.

ಹಳ್ಳಿ ಹಳ್ಳಿಗಳಲ್ಲಿ ಚೆಕ್ ಡ್ಯಾಂ ಗಳ ಮೂಲಕ ಗ್ರಾಮದಲ್ಲಿ ಕೃಷಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲು ಸರಕಾರ ಅನುದಾನ ಒದಗಿಸಿದ್ದು, ಕಾಮಗಾರಿಗಳು ಪ್ರಗತಿಯಲ್ಲಿದೆ.


ಕೃಷಿ ಸಮ್ಮಾನ್ ಯೋಜನೆ ಮೂಲಕ ಗ್ರಾಮೀಣ ಭಾಗದ ಕೃಷಿಕರ ಖಾತೆಗೆ ಕೋಟ್ಯಾಂತರ ರೂ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ ಅವರು ಮುಂದಿನದಿನಗಳಲ್ಲಿ ಅಭಿವೃದ್ಧಿಗೆ ತಾಲೂಕಿನ ಜನರ ಸಹಕಾರ ಯಾಚಿಸಿ ದರು.

LEAVE A REPLY

Please enter your comment!
Please enter your name here