ಪ್ರಧಾನಿ ನರೇಂದ್ರ ಮೋದಿಯವರ 8 ವರ್ಷಗಳ ಆಡಳಿತ ಪೂರ್ಣದ ಸಂಭ್ರಮ; ಜೂ.16ಕ್ಕೆ ಬೆಳಿಗ್ಗೆ ಬಿಜೆಪಿ ಎಸ್.ಟಿ ಸಮಾಜದಿಂದ ಸನ್ಮಾನ, ಮಧ್ಯಾಹ್ನ ಪಕ್ಷದ ವತಿಯಿಂದ ಸಾಧಕರಿಗೆ ಸನ್ಮಾನ

0

ಪುತ್ತೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 6 ವರ್ಷಗಳು ಆಡಳಿತ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಅಂಗವಾಗಿ ಸೇವೆ, ಸುಶಾಸನ, ಬಡವರ ಕಲ್ಯಾಣ ಕಾರ್ಯಕ್ರಮದಡಿ ಬಿಜೆಪಿ ಮಂಡಲದ ನೇತೃತ್ವದಲ್ಲಿ ಜೂ. ೧೬ರಂದು ಬೆಳಿಗ್ಗೆ ಎಸ್.ಟಿ ಮೋರ್ಚಾದಿಂದ ಎಸ್.ಟಿ.ಸಮಾಜದ ಗುರಿಕಾರರಿಗೆ ಮತ್ತು ಸಾಧಕರಿಗೆ ಸನ್ಮಾನ, ಕಾರ್ಯಗಾರ ನಡೆಯಲಿದ್ದು ಮಧ್ಯಾಹ್ನದ ಬಳಿಕ ಪಕ್ಷದ ವತಿಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಜರುಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್.ಟಿ.ಮೋರ್ಚಾ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಎನ್.ಎಸ್ ಅವರು ಸೇವೆ ಸುಶಾಸನ, ಬಡವರಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಸಮಾಜದ ಗುರಿಕಾರರನ್ನು ಮತ್ತು ಸಾಧಕರನ್ನು ಸನ್ಮಾನಿಸಲಾಗುವುದು. ಪದ್ಮಶ್ರೀ ಪುರಸ್ಕೃತ ಮಹಾಲಿಂಗ ನಾಯ್ಕ್ ಅವರು ಸಾಧಕರನ್ನು ಸನ್ಮಾನಿಸಲಿದ್ದಾರೆ. ಶಾಸಕ ಸಂಜೀವ ಮಠಂದೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಅನೇಕ ಪಕ್ಷದ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

ಪಕ್ಷದ ವತಿಯಿಂದ ಸನ್ಮಾನ:
ಪಕ್ಷದ ವತಿಯಿಂದ ನಡೆಯುವ ಸಾಧಕರ ಸಮಾವೇಶದ ಸಂಚಾಲಕಿ ವಿದ್ಯಾ ಆರ್ ಗೌರಿ ಅವರು ಮಾತನಾಡಿ ಪರಿವಾರ ವಿವಿಧ ಮೋರ್ಚಾಗಳಿಂದ ಕಾರ್ಯಕ್ರಮ ನಡೆಯುತ್ತಿದೆ. ಅದೇ ರೀತ ಪಕ್ಷದ ವತಿಯಿಂದ ಸಾಹಿತ್ಯ, ಕಲೆ, ರಂಗಭೂಮಿ, ಕ್ರೀಡಾ, ಸಂಗೀತ ಸೇರಿದಂತೆ ೧೭ ಕ್ಷೇತ್ರಗಳನ್ನು ಆಯ್ಕೆ ಮಾಡಿ ಅದರಲ್ಲಿ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ಜೂ. 16ರಂದು ಮಧ್ಯಾಹ್ನ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಮಾವೇಶದ ಸಂಚಾಲಕ ಅರುಣ್ ಕುಮಾರ್ ವಿಟ್ಲ, ಜಿಲ್ಲಾ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹರೀಶ್ ಬಿಜತ್ರೆ, ಗ್ರಾಮಾಂತರ ಮಂಡಲ ಎಸ್.ಟಿ ಮೋರ್ಚಾದ ಅಧ್ಯಕ್ಷ ಶಿವಪ್ಪ ನಾಯ್ಕ್ ಪೆರ್ನೆ, ಪ್ರಧಾನ ಕಾರ್ಯದರ್ಶಿ ಹರೀಶ್ ದರ್ಬೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here