ಜೂ.17ಕ್ಕೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಸಾಮೂಹಿಕ ಕುಂಕುಮಾರ್ಚನೆ

0

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳು ಮಹಿಳೆಯರಿಂದ ನಡೆಯುವ ಸಾಮೂಹಿಕ ಕುಂಕುಮಾರ್ಚನೆ ಕಾರ್ಯಕ್ರಮ ಜೂ.17ರಂದು ಸಂಜೆ ನಡೆಯಲಿದೆ.


ಸಂಜೆ ಗಂಟೆ 5ಕ್ಕೆ ದೇವಳದ ಪ್ರಾರಂಗಣದಲ್ಲಿ ಲಲಿತಾ ಸಹಸ್ರನಾಮ ಪಠಣದೊಂದಿಗೆ ಮಹಿಳೆಯರಿಂದ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ. ಮಾತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಾಗ ಎರಡು ಸಣ್ಣ ಹರಿವಾಣ, ಲಲಿತ ಸಹಸ್ರನಾಮ ಪುಸ್ತಕ ತರುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಮತ್ತು ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಂಡಾರಿ ಹೆಚ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here