ಪರಿಸರ ಸ್ವಚ್ಛತೆ, ಪ್ಲಾಸ್ಟಿಕ್ ಮುಕ್ತ ಸಮಾಜದ ಮಾಹಿತಿ ಕಾರ್ಯಕ್ರಮ

0

ಪುತ್ತೂರು: ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಪುತ್ತೂರು, ನವ್ಯಶ್ರೀ ಮಹಿಳಾ ಮಂಡಳಿ ಪುತ್ತೂರು,ವನಿತಾ ಸಮಾಜ ಹಾರಾಡಿ,ಲಯನ್ಸ್ ಕ್ಲಬ್ ಪುತ್ತೂರು ಹಾಗೂ ಮಾದರಿ ವಿಕಾಸ ಕೇಂದ್ರ ಬೀರಿಗ ಬನ್ನೂರು ಇದರ ಸಂಯುಕ್ತಾಶ್ರಯದಡಿ ಪುತ್ತೂರು ಲಯನ್ಸ್ ಸೇವಾ ಮಂದಿರದಲ್ಲಿ ಪರಿಸರ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಮುಕ್ತ ಸಮಾಜ ಮಾಹಿತಿ ಕಾರ್ಯಕ್ರಮ ನಡೆಯಿತು.

ತಾಲೂಕು ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷರಾಗಿರುವ ನಿವೃತ್ತ ಸಿಡಿಪಿಓ ಶಾಂತಿ ಹೆಗಡೆರವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮ ಬೀರಿಗ ಮಾದರಿ ವಿಕಾಸ ಕೇಂದ್ರದ ಅರುಣಾ ಡಿ.ರವರ ತಂಡದ ಆಶಯ ಗೀತೆಯೊಂದಿಗೆ ಪ್ರಾರಂಭಗೊಂಡಿತು. ಬಳಿಕ ವನಿತಾ ಸಮಾಜದ ಉಪಾಧ್ಯಕ್ಷೆ ವತ್ಸಲಾ ರಾಜ್ಞಿ ಸ್ವಾಗತಿಸಿದರು. ನಗರಸಭಾಧ್ಯಕ್ಷ ಜೀವಂಧರ್ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಬಳಿಕ ಸಂಪನ್ಮೂಲ ವ್ಯಕ್ತಿಯಾಗಿದ್ದ ದ.ಕ. ಜಿಲ್ಲಾ ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿರವರು ಮಾಹಿತಿ ನೀಡಿ ನಮ್ಮ ನಮ್ಮ ಮನೆಗಳ ಸ್ವಚ್ಛತೆ ಹಾಗೂ ಪ್ಲಾಸ್ಟಿಕ್ ಮುಕ್ತವಾಗಿ ನಮ್ಮ ಸಮಾಜವನ್ನು ಹೇಗೆ ಮಾಡಬಹುದು ಎಂಬುದರ ಬಗ್ಗೆ ತಿಳಿಸಿದರು. ಲಯನ್ಸ್ ಕ್ಲಬ್ ಕಾರ್ಯದರ್ಶಿ ಕೇಶವ ನಾಯ್ಕ್, ಬನ್ನೂರು ಬೀರಿಗ ಮಾದರಿ ವಿಕಾಸ ಕೇಂದ್ರದ ಅಧ್ಯಕ್ಷೆ ಗಿರಿಜಾ, ಜಿಲ್ಲಾ ಮಹಿಳಾ ಒಕ್ಕೂಟದ ಉಪಾಧ್ಯಕ್ಷೆ ಉಷಾ ನಾಯಕ್ ಮತ್ತು ತಾಲೂಕು ಮಹಿಳಾ ಒಕ್ಕೂಟದ ಕಾರ್ಯದರ್ಶಿ ಪೂರ್ಣಿಮಾ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ಲು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಬೀರಿಗ ಮಾದರಿ ವಿಕಾಸ ಕೇಂದ್ರದ ತಂಡದಿಂದ ಅಭಿನಯ ಗೀತೆ ನಡೆಯಿತು. ನವ್ಯಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ರಾವ್ ವಂದಿಸಿದರು. ತಾಲೂಕು ಮಹಿಳಾ ಒಕ್ಕೂಟದ ಜತೆ ಕಾರ್ಯದರ್ಶಿಯಾಗಿರುವ ನಿವೃತ್ತ ಮುಖ್ಯ ಶಿಕ್ಷಕಿ ರಂಜಿನಿ ಆರ್. ಭಟ್ ಕೊಡಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು. ಜನಶಿಕ್ಷಣ ಟ್ರಸ್ಟ್ ನಿರ್ದೇಶಕ ಕೃಷ್ಣಮೂಲ್ಯ, ಹರಿಣಾಕ್ಷಿ ಜೆ.ಶೆಟ್ಟಿ, ನಯನಾ ರೈ ನೆಲ್ಲಿಕಟ್ಟೆ, ವೇದಾವತಿ ಏಣಿತ್ತಡ್ಕ, ಮೋಹಿನಿ ಮನವಳಿಕೆ ಮತ್ತಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here