ಜೂ.18 : ಕೊಳ್ತಿಗೆಯಲ್ಲಿ ಪುತ್ತೂರು ತಹಶೀಲ್ದಾರರ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ

0

ಪುತ್ತೂರು : ಪುತ್ತೂರು ತಾಲೂಕು ಕಂದಾಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪುತ್ತೂರು ತಾಲೂಕು ತಹಶೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಜೂ.೧೮ರಂದು ಬೆಳಿಗ್ಗೆ ೧೦ರಿಂದ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಭವನದಲ್ಲಿ ನಡೆಯಲಿದೆ.

ಗ್ರಾಮ ವಾಸ್ತವ್ಯದಲ್ಲಿ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರಲಿದ್ದು ಕಂದಾಯ ಇಲಾಖೆ ಮತ್ತು ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ನೀಡಲಾಗುವುದು. ಅರ್ಹ ಪ್ರಕರಣಗಳನ್ನು ಸ್ಥಳದಲ್ಲಿಯೇ ಇತ್ಯರ್ಥಪಡಿಸಲು ಕ್ರಮ ಜರಗಿಸಲಾಗುವುದು. ಕೊಳ್ತಿಗೆ ಗ್ರಾಮದ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here