ಮುಂಡೂರು ಗ್ರಾಮ ಪಂಚಾಯತ್‌ನಲ್ಲಿ ಕಣ್ಣಿನ ಉಚಿತ ತಪಾಸಣೆ, ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

0

ಪುತ್ತೂರು: ಮುಂಡೂರು ಗ್ರಾ.ಪಂ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪ್ರಸಾದ್ ನೇತ್ರಾಲಯ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ `ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ’ ಶಿಬಿರ ಮುಂಡೂರು ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ನಡೆಯಿತು.

ಮುಂಡೂರು ಗ್ರಾ.ಪಂ ಅಧ್ಯಕ್ಷೆ ಪುಷ್ಪಾ ಎನ್ ಅಧ್ಯಕ್ಷತೆ ವಹಿಸಿದ್ದರು. ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮೀತಾ ನಾಯ್ಕ್ ಉದ್ಘಾಟಿಸಿದರು. ಮಂಗಳೂರು ಪ್ರಸಾದ್ ನೇತ್ರಾಲಯದ ಡಾ.ಅವಿನಾಶ್, ಮುಂಡೂರು ಗ್ರಾ.ಪಂ ಪಿಡಿಓ ಗೀತಾ ಬಿ.ಎಸ್, ಪುತ್ತಿಲ ಶ್ರೀರಾಮ ಗೆಳೆಯರ ಬಳಗದ ಅಧ್ಯಕ್ಷ ಪ್ರಕಾಶ್ ಡಿಸೋಜ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

165 ಜನರ ತಪಾಸಣೆ:

ಶಿಬಿರದಲ್ಲಿ ಒಟ್ಟು 165 ಗ್ರಾಮೀಣ ಫಲಾನುಭವಿಗಳಿಗೆ ಉಚಿತವಾಗಿ ಬಿಪಿ, ಶುಗರ್, ಕೋವಿಡ್ ಬೂಸ್ಟರ್ ಡೋಸ್ ಮತ್ತು ಕಣ್ಣಿನ ತಪಾಸಣೆಯನ್ನು ನಡೆಸಲಾಯಿತು. 165 ಫಲಾನುಭವಿಗಳ ಪೈಕಿ 25 ಫಲಾನುಭವಿಗಳಿಗೆ ಪೊರೆ ಶಸ್ತ್ರ ಚಿಕಿತ್ಸೆಯು ಉಚಿತವಾಗಿ ದೊರೆಯಲಿದೆ ಎಂದು ಶಿಬಿರದ ನಿರ್ದೇಶಕರಾದ ಮುರಳಿಧರ ಭಟ್ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಂಡೂರು ಗ್ರಾ.ಪಂ ಸದಸ್ಯ ಅಶೋಕ್ ಕುಮಾರ್ ಪುತ್ತಿಲ, ಮಹಮ್ಮದ್ ಆಲಿ, ಕಾವ್ಯ ಕಡ್ಯ, ಉಮೇಶ ಅಂಬಟ, ದುಗ್ಗಪ್ಪ ಕಡ್ಯ, ಯಶೋಧಾ, ಚಂದ್ರಶೇಖರ್ ಎನ್‌ಎಸ್‌ಡಿ, ಬಾಬು ಕಲ್ಲುಗುಡ್ಡೆ, ಸುನಂದಾ ಹಾಗೂ ಆಶಾ ಕಾರ್ಯಕರ್ತೆಯರು, ಆರೋಗ್ಯ ಸಹಾಯಕಿಯರು, ಅಂಗನವಾಡಿ ಶಿಕ್ಷಕಿಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಗ್ರಾ.ಪಂ ಸಿಬ್ಬಂದಿಗಳಾದ ದೇವಪ್ಪ ನಾಯ್ಕ.ಕೆ, ಕೊರಗಪ್ಪ ನಾಯ್ಕ ಕೆ, ಸತೀಶ್ ಹೆಚ್, ಮೋಕ್ಷ ಸಹಕರಿಸಿದರು. ಗ್ರಂಥಾಲಯ ಮೇಲ್ಚಿಚಾರಕಿ ಕವಿತಾ ಪ್ರಾರ್ಥಿಸಿದರು. ಅಶೋಕ್ ಕುಮಾರ್ ಪುತ್ತಿಲ ಸ್ವಾಗತಿಸಿದರು. ಶಶಿಧರ ಕೆ ಮಾವಿನಕಟ್ಟೆ ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ್ ಡಿಸೋಜಾ ವಂದಿಸಿದರು.

LEAVE A REPLY

Please enter your comment!
Please enter your name here