ಹಿಂದುಗಳ ಮೇಲೆ ನಡೆಯುತ್ತಿರುವ ವ್ಯವಸ್ಥಿತ ದಾಳಿಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ವಿಹಿಂಪ, ಬಜರಂಗದಳದಿಂದ ರಾಷ್ಟ್ರಪತಿಗಳಿಗೆ ಸಹಾಯಕ ಕಮೀಷನರ್ ಮೂಲಕ ಮನವಿ

0

ಪುತ್ತೂರು: ದೇಶದಲ್ಲಿ ಧರ್ಮಾಂಧತೆ ಮತ್ತು ಹಿಂಸಾಚಾರದ ನಡೆಯುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ವಿಶ್ವಹಿಂದು ಪರಿಷತ್ ಬಜರಂಗದಳದಿಂದ ಜೂ.16ರಂದು ಪುತ್ತೂರು ಸಹಾಯಕ ಕಮೀಷನರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ನೀಡಲಾಯಿತು.

ಹಿಂದೂ ಸಮಾಜದ ದೇವರ, ದೇವತೆಗಳ ಮೇಲೆ ಅನಿಯಂತ್ರಿತ ಪ್ರಚಾರ ಮಾಡಲಾಗುತ್ತಿದೆ ಮತ್ತು ದಬ್ಬಾಳಿಕೆ ನಡೆಯುತ್ತಿದೆ. ಹಿಜಾಬ್ ವಿಚಾರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಲಾಗಿದೆ ಈ ಕುರಿತು ಹಲವು ರಾಜಕೀಯ ಪಕ್ಷಗಳು ಮೌನವಹಿಸಿದೆ. ಅದಲ್ಲದೆ ಹಿಂದೂ ದೇವರ ಮೇಲಾಗುವ ಅನಿಯಂತ್ರಿತ ಪ್ರಚಾರಕ್ಕೆ ಮೌನವಾಗಿರುವ ಜಾತ್ಯಾತೀತ ಪಕ್ಷಗಳು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆನ್ನಲಾದ ಬಿಜೆಪಿಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಹಾಗೂ ನವೀನ್ ಕುಮಾರ್ ಜಿಂದಾಲ್ ಅವರ ಕುರಿತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬ ಹೇಳಿಕೆ ನೀಡುವ ಮೂಲಕ ಧರ್ಮದ್ರೋಹದ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಗಲಭೆಕೋರರನ್ನು ಗುರುತಿಸಿ, ಅವರ ವಿರುದ್ದ ರಾಷ್ಟ್ರೀಯ ಸುರಕ್ಷತಾ ಅಡಿಯಲ್ಲಿ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರನ್ನು ಗಡಿ ಪಾರುಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಮನವಿಯಲ್ಲಿ ತಿಳಿಸಲಾಗಿದೆ. ವಿಶ್ವಹಿಂದು ಪರಿಷತ್ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಪ್ರಚಾರ ಪ್ರಮುಖ್ ಶ್ರೀಧರ್ ತೆಂಕಿಲ, ಪುತ್ತೂರು ಪ್ರಖಂಡದ ಯೋಜಕ ಹರೀಶ್ ಕುಮಾರ್ ದೋಳ್ಪಾಡಿ, ಉಪಾಧ್ಯಕ್ಷ ಸೇಷಪ್ಪ ಗೌಡ ಬೆಳ್ಳಿಪ್ಪಾಡಿ, ಪುತ್ತೂರು ಗ್ರಾಮಾಂತರ ಪ್ರಖಂಡದ ಕಾರ್ಯದರ್ಶಿ ರವಿ ಕುಮಾರ್ ಕೈತ್ತಡ್ಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here