ಪದವೀಧರ, ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಚುನಾವಣೆ -ಕಾಂಗ್ರೆಸ್ ಗೆಲುವು, ವಿಜಯೋತ್ಸವ

0

ಪುತ್ತೂರು: ವಾಯುವ್ಯ ಶಿಕ್ಷಕರ ಕ್ಷೇತ್ರ ಮತ್ತು ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ತುಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಎದುರು ಪಟಾಕಿ ಸಿಡಿಸಿ ವಿಜಯೋತ್ಸವ ಸಿಡಿಸಿದರು. ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈಯವರು ಮಾತನಾಡಿ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಕಾಶ್ ಹುಕ್ಕೇರಿಯವರು ೫೦೦೦ಕ್ಕೂ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು. ಇದು ಈವರೆಗೆ ಬಿಜೆಪಿ ಭದ್ರಕೋಟೆಯಾಗಿದ್ದು ಇದೀಗ ಕಾಂಗ್ರೆಸ್ ಪಾಲಾಗಿದೆ.

ದಕ್ಷಿಣ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್‌ನ ಮಧು ಮಾದೇ ಗೌಡರವರು ೧೨,೦೦೦ಕ್ಕೂ ಮಿಕ್ಕಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಇದು ಜೆಡಿಎಸ್‌ನ ಭದ್ರಕೋಟೆಯಾಗಿದ್ದು ಇದೀಗ ಕಾಂಗ್ರೆಸ್ ಪಾಲಾಗಿದೆ ಎಂದು ನುಡಿದರು. ಇದರಿಂದ ಕಾಂಗ್ರೆಸ್‌ನ ವೈಭವ ಪುನರುಪಿಯಾಗಿದೆ. ಶಿಕ್ಷಕರು ಹಾಗೂ ಪದವೀಧರರು ವಿದ್ಯಾವಂತರಾಗಿದ್ದು ಅವರೆಲ್ಲರೂ ಕಾಂಗ್ರೆಸ್‌ನ ಕಡೆಗೆ ಒಲವು ತೋರುವ ಮೂಲಕ ಬದಲಾವಣೆ ತಂದಿದ್ದಾರೆ. ಇದರಿಂದ ಕಾಂಗ್ರೆಸ್‌ಗೆ ಮುಂದೆ ಉತ್ತಮ ಭವಿಷ್ಯವಿದ್ದು ಪುತ್ತೂರು ಕ್ಷೇತ್ರ ಸೇರಿದಂತೆ ಎಲ್ಲಾ ಕಡೆಗಳಲ್ಲೂ ವಿಜಯ ಭಾರಿಸಲಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ಪುತ್ತೂರು ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಎಚ್.ಎ ಶಕೂರ್ ಹಾಜಿ ಜಿಲ್ಲಾ ಸೇವಾದಳದ ಅಧ್ಯಕ್ಷ ಜೋಕಿಂ ಡಿಸೋಜ, ಪುತ್ತೂರು ಸೇವಾದಳದ ಅಧ್ಯಕ್ಷ ವಿಶ್ವ ವಿಜೇತ್ ಅಮ್ಮುಂಜ, ಎಸ್‌ಇ ಘಟಕದ ಅಧ್ಯಕ್ಷ ಕೇಶವ ಪಡೀಲ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್, ಪ್ರಧಾನ ಕಾರ‍್ಯದರ್ಶಿ ಅಮಲ ರಾಮಚಂದ್ರ, ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಅಭಿಷೇಕ್ ಬೆಳ್ಳಿಪ್ಪಾಡಿ, ಮಮ್ಮೂಟಿ ತಾರಿಗುಡ್ಡೆ, ಒಳಮೊಗ್ರು ವಲಯ ಕಾಂಗ್ರೆಸ್ ಅಶೋಕ್ ಪೂಜಾರಿ ಒಳಮೊಗ್ರು, ನವಾಝ್, ಬ್ಲಾಕ್ ಕಾಂಗ್ರೆಸ್ ಕಾರ‍್ಯದರ್ಶಿ ಹಬೀಬ್ ಕಣ್ಣೂರು, ಶೆರೀಫ್ ಬಲ್ನಾಡು, ಉನೈಸ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here